LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ

 

ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಸಲ್ಲಿಸಬಹುದು.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ, ಎಸ್.ಟಿ ರೂ.2.50 ಲಕ್ಷ ಒಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ಒಳಗಿರಬೇಕು.

ವಿದ್ಯಾರ್ಥಿಗಳು https://shp.karnataka.gov.in ವೆಬ್‍ಸೈಟ್‍ನ್ನು ಸಂಪರ್ಕಿಸಿ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು, ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಅದೇಶಕ್ಕಾಗಿ ಇಲಾಖೆಯ https://bcwd.karnataka.gov.in  ವೆಬ್‍ಸೈಟ್‍ಯನ್ನು ಸಂಪರ್ಕಿಸಬಹುದು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ವೆಬ್‍ಸೈಟ್‍ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!