LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೇ.19ರಂದು ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

 

ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಮೇ.19ರಂದು ಬೆಳಿಗ್ಗೆ 11 ಗಂಟೆಗೆ ಪ್ರವೇಶ ಪರೀಕ್ಷೆ ಜರುಗಲಿದೆ.

ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ವಸತಿ ಶಾಲೆಗಳ ಪ್ರಾಂಶುಪಾಲರಿಂದ ಪ್ರವೇಶ ಪತ್ರಗಳನ್ನು ಪಡೆದು ಪ್ರವೇಶ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ.

ಈ ಪರೀಕ್ಷೆಗೆ ಸಂಬಂಧಿಸಿದಂತೆ ಹಿರಿಯೂರು ತಾಲ್ಲೂಕು ದೇವರಕೊಟ್ಟ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಹಿರಿಯೂರು ನಗರದ ಕೆಎಸ್‍ಆರ್‍ಟಿಸಿ ಬಸ್ ಸ್ಟ್ಯಾಂಡ್ ಎದುರಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಚಳ್ಳಕೆರೆಯ ಶಾಂತಿನಗರದ ಸೈನಿಕ ಆಸ್ಪತ್ರೆ ಹತ್ತಿರದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ, ಚಳ್ಳಕೆರೆ ನಗರದ ತಾಲ್ಲೂಕು ಆಡಳಿತ ಕಚೇರಿ ಪಕ್ಕದ ಹೆಗ್ಗೆರೆ ತಾಯಮ್ಮ ಸರ್ಕಾರಿ ಬಾಲಕಿಯರ ಪೌಢಶಾಲೆ ಹಾಗೂ ಚಿತ್ರದುರ್ಗ ನಗರದ ನಿರ್ಮಿತಿ ಕೇಂದ್ರದ ಬಳಿ ಇರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಅನ್ನು ಪರೀಕ್ಷಾ ಕೇಂದ್ರಗಳಾಗಿ ಹಂಚಿಕೆ ಮಾಡಲಾಗಿದೆ. ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಟ್ಸ್ಪ್‌ನಲ್ಲಿ ತಪ್ಪು ಸಂದೇಶ ಹರಿದಾಟ ಮೋಸ ಹೋಗಬೇಡಿ.!ನವೋದಯ ಶಾಲೆ ಪ್ರವೇಶಕ್ಕೆ ಅ.07 ವರೆಗೆ ಕಾಲಾವಕಾಶ2025 ರಲ್ಲಿ, ಈ 3 ರಾಶಿಯವರು ರಾಜರಂತೆ ಬದುಕುತ್ತಾರೆ, ಅವರಿಗೆ ರಾಹುವಿನ ಕೃಪೆ ಇರುತ್ತದೆ!ವಚನ:    -- -ಮಧುವಯ್ಯ .!ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನ ಎಸ್‌ಐಟಿ ಕಸ್ಟಡಿಗೆ'ಸರ್ಕಾರ ಅಭದ್ರಗೊಳಿಸುವ ಬಿಜೆಪಿ ಜೆಡಿಎಸ್ ಪ್ರಯತ್ನಕ್ಕೆ ಸೋಲು ಖಚಿತ' -ಮುಖ್ಯಮಂತ್ರಿ'ಕಾಶ್ಮೀರ ಭಾರತದ ಭಾಗವಲ್ಲ, ಅದು ಈಗಾಗಲೇ ಪ್ರತ್ಯೇಕ ದೇಶವೇ?' - ರಾಹುಲ್ ಗಾಂಧಿಗೆ ನೆಟ್ಟಿಗರಿಂದ ಕ್ಲಾಸ್'ರಾಜಭವನದ ದುರ್ಬಳಕೆ ಮಾಡಿ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚು'- ಸಿಎಂ ಕಿಡಿಮತ್ತೆ ಜೈಲು ಸೇರಿದ ಬಿಜೆಪಿ ಶಾಸಕ ಮುನಿರತ್ನಗೆ ಅನರ್ಹ ಭೀತಿ.. ಶಾಸಕ ಸ್ಥಾನಕ್ಕೂ ಕುತ್ತು..?ಸಿಎಂ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ- ಬಿಜೆಪಿ