E-PAPER
17 Nov 2026, 12:24:15 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

*ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ*

ಬೆಂಗಳೂರು-೧೩:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೊಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೊಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ ರೂ ಸಾಲ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೊಂದಣಿಯಾಗುವುದು ಕಡ್ಡಾಯವಾಗಿದೆ. ಈ ಸಂಸ್ಥೆಗಳು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ ಹಾಗೂ ಸುಸ್ತಿ ಸಾಲಗಳ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಲ್ಲಿಸದಿದ್ದರೆ 6 ತಿಂಗಳ ಕಾರಗೃಹವಾಸ ಅಥವಾ 10 ಸಾವರಿರೂ ವರೆಗೆ ದಂಡ ಅಥವಾ ಎರಡೂ ಶಿಕ್ಷೆಗೆ ಗುರಿಯಾಗುತ್ತಾರೆ.
ವಿವಾದಗಳನ್ನು ಇತ್ಯರ್ಥಗಳನ್ನು ಒಂಬುಡ್ಸ್‍ಮನ್‍ಗಳನ್ನು ಸರ್ಕಾರ ಅಧಿಸೂಚನೆ ಮೂಲಕ ನೇಮಕ ಮಾಡುವ ಅಧಿಕಾರ ಹೊಂದಿರುತ್ತದೆ.

 

ಬಲವಂತದ ವಸೂಲಾತಿಗಳನ್ನು ಕೈಗೊಳ್ಳುವ ವ್ಯಕ್ತಿಯು ವಿಚಾರಣೆಗೆ ಒಳಪಡುತ್ತಾನೆ, ಹತ್ತು ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಾರಗೃಹವಾಸ ಶಿಕ್ಷೆ ಹಾಗೂ 5 ಲಕ್ಷ ರೂ ವರೆಗೆ ವಿಧಿಸಬಹುದಾದ ಜುಲ್ಮಾನೆಗೆ ಒಳಪಡುತ್ತಾನೆ. ಈ ಅಪರಾಧಗಳು ಸಂಜ್ಞೆಯ (ಕಾಗ್ನಿಜಿಬಲ್) ಹಾಗೂ ಜಾಮೀನು ರಹಿತ (ನಾನ್ ಬೇಲೆಬಲ್) ಪ್ರಕರಣಗಳಾಗಿರುತ್ತವೆ. ಯಾವುದೇ ಪೊಲೀಸ್ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲು ನಿರಾಕರಿಸಬಾರದು. ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್‍ಪಿ) ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯು ಸ್ವತಃ (ಸುಮೊಟೊ) ಪ್ರಕರಣ ದಾಖಲಿಸಬಹುದು. ಸರ್ಕಾರವು ಈ ಅಧ್ಯಾದೇಶದ ಅನುಷ್ಠಾನಕ್ಕೆ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ. ಈ ಆದೇಶದಿಂದ ಆರ್.ಬಿ.ಐ ಮತ್ತು ಕೇಂದ್ರ / ರಾಜ್ಯ ಸರ್ಕಾರಗಳಿಂದ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚಿಸಲು ಹಾಗೂ ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ನೀಡುತ್ತದೆ.
                                                *ಡಾ. ಶಾಲಿನಿ ರಜನೀಶ್*,
(ಸರ್ಕಾರದ ಮುಖ್ಯ ಕಾರ್ಯದರ್ಶಿಗಳು)

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.