LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊಟ್ಟೆ – ತರಕಾರಿ ಆಮ್ಲೆಟ್ ಮಾಡುವ ವಿಧಾನ

ಮೊಟ್ಟೆ– ತರಕಾರಿ ಆಮ್ಲೆಟ್ ತಯಾರಿಸುವ ವಿಧಾನ. ಬೇಕಾಗುವ ಸಾಮಾಗ್ರಿಗಳು ಮೊಟ್ಟೆ – 3 ಈರುಳ್ಳಿ -1 ಕ್ಯಾರೆಟ್ -1 ಬೀನ್ಸ್ -5 ಹಸಿಮೆಣಸಿನಕಾಯಿ -2 ಕ್ಯಾಪ್ಸಿಕಂ -1/2 ಕೊತ್ತಂಬರಿ ಸೊಪ್ಪು ಸ್ವಲ್ಪ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸ್ವಲ್ಪ ಅರಿಶಿಣ ಪುಡಿ – 1/2 ಚಮಚ ಕರಿಬೇವಿನ ಸೊಪ್ಪು – 4-5 ಎಲೆ ಪೆಪ್ಪರ್‌ಪುಡಿ – ಅಗತ್ಯವಿದ್ದಷ್ಟು ಎಣ್ಣೆ ಸ್ವಲ್ಪ ಸಾಸಿವೆ – 1 ಚಮಚ ಉಪ್ಪು ರುಚಿಗೆ ತಕ್ಕಷ್ಟು

ಮಾಡುವ ವಿಧಾನ ಈರುಳ್ಳಿ, ಕ್ಯಾರೆಟ್, ಬೀನ್ಸ್, ಕ್ಯಾಪ್ಸಿಕಂ, ಕೊತ್ತಂಬರಿ ಸೊಪ್ಪು, ಹಸಿಮೆಣಸಿನಕಾಯಿಗಳನ್ನು ಸಣ್ಣಗೆ ಕತ್ತರಿಸಿಟ್ಟುಕೊಳ್ಳಿ. ತೆರೆದ ಪಾತ್ರೆಗೆ ಎಣ್ಣೆ ಹಾಕಿ ಕಾದ ನಂತರ ಸಾಸಿವೆ ಸಿಡಿಸಿ. ಹಸಿಮೆಣಸಿನಕಾಯಿ, ಕರಿಬೇವು, ಕ್ಯಾಪ್ಸಿಕಂ, ಈರುಳ್ಳಿ, ಕ್ಯಾರೆಟ್, ಬೀನ್ಸ್, ಕೊತ್ತಂಬರಿಸೊಪ್ಪು, ಪೆಪ್ಪರ್‌ಪುಡಿ, ಉಪ್ಪು ಮತ್ತು ಅರಿಶಿಣ ಪುಡಿ ಹಾಕಿ ಚೆನ್ನಾಗಿ ಫ್ರೈ ಮಾಡಿ. ಮೊಟ್ಟೆಯನ್ನು ಒಡೆದು ಬಟ್ಟಲಿಗೆ ಹಾಕಿ ಚೆನ್ನಾಗಿ ಗೊಟಾಯಿಸಿದ ನಂತರ ಉಪ್ಪು, ಫ್ರೈ ಮಾಡಿದ ಪದಾರ್ಥಗಳನ್ನು ಆರಿದ ಮೇಲೆ ಹಾಕಿ ಚೆನ್ನಾಗಿ ಕಲೆಸಿ. ಒಲೆಯ ಮೇಲೆ ಫ್ರೈ ಪ್ಯಾನ್ ಇರಿಸಿ ಎಣ್ಣೆ ಸವರಿ ಖಾದ ನಂತರ ಮೊಟ್ಟೆ ಮಿಶ್ರಣವನ್ನು ಹಾಕಿ ದೋಸೆ ರೀತಿ ವೃತ್ತಾಕಾರದಲ್ಲಿ ಹರಡಬೇಕು. ಮುಚ್ಚಳ ಮುಚ್ಚಿ ಮಧ್ಯಮ ಉರಿಯಲ್ಲಿ ಒಂದು ಬದಿಯನ್ನು ಚೆನ್ನಾಗಿ ಬೇಯಿಸಿದ ನಂತರ ಮುಚ್ಚಳ ತೆಗೆದು, ಮಗುಚಿ ಹಾಕಿ ಇನ್ನೊಂದು ಬದಿಯನ್ನು ಚೆನ್ನಾಗಿ ಬೇಯಿಸಿ. ಈಗ ಮೊಟ್ಟೆ– ತರಕಾರಿ ಆಮ್ಲೆಟ್ ಊಟದ ಜೊತೆ ನೆಂಚಲು ರೆಡಿ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST