LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊದಲು ಜೋ ನಂತರ ಕಮಲಾ! - ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಹತ್ಯೆ ಮಾಡಿದ ಎಫ್‌ಬಿಐ

ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಮತ್ತು ಇತರ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಶಸ್ತ್ರಸಜ್ಜಿತ ವ್ಯಕ್ತಿಯನ್ನು ಎಫ್‌ಬಿಐ ಏಜೆಂಟ್‌ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಸಾಲ್ಟ್ ಲೇಕ್ ಸಿಟಿಯ ದಕ್ಷಿಣದ ಪ್ರೊವೊದಲ್ಲಿರುವ ಕ್ರೆಹ್ ಡೆಲೆವ್ ರಾಬರ್ಟ್‌ಸನ್ ಎಂಬಾತನ ಮನೆಯಲ್ಲಿ ಆಗಸ್ಟ್ 9ರಂದು ಬೆಳಗ್ಗೆ 6.15 ಕ್ಕೆ ಬಂಧನಕ್ಕೆ ಮತ್ತು ಸರ್ಚ್ ವಾರಂಟ್ ಯತ್ನಿಸುತ್ತಿದ್ದಾಗ ಗುಂಡಿನ ದಾಳಿ ನಡೆದ ಹಿನ್ನಲೆ ಹತ್ಯೆ ಮಾಡಲಾಗಿದೆ ಎಂದು ಎಫ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಗುಂಡಿನ ದಾಳಿ ಸಂದರ್ಭದಲ್ಲಿ ರಾಬರ್ಟ್​ಸನ್ ಶಸ್ತ್ರಸಜ್ಜಿತನಾಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಬರ್ಟ್‌ಸನ್ ಮರಗೆಲಸ ವ್ಯಾಪಾರವನ್ನು ಹೊಂದಿದ್ದು, ಆದರೆ ರಾಜ್ಯ ದಾಖಲೆಗಳ ಪ್ರಕಾರ ಕಳೆದ ವರ್ಷ ಅವರ ವ್ಯಾಪಾರಕ್ಕೆ ನೀಡಿದ್ದ ಲೈಸೆನ್ಸ್​ ಮುಗಿದಿದ್ದು ಮತ್ತೆ ಪರವಾನಗಿಯನ್ನು ನವೀಕರಿಸಲಿಲ್ಲ. ಲಿಂಕ್ಡ್​ಇನ್​ನಲ್ಲಿ ರಾಬರ್ಟ್​ಸನ್ 45 ವರ್ಷಗಳ ಕಾಲ ಸ್ಟ್ರಕ್ಚರಲ್ ಸ್ಟೀಲ್ ಮತ್ತು ವೆಲ್ಡಿಂಗ್ ಇನ್ಸ್​ಪೆಕ್ಟರ್ ಆಗಿ ಸೇವೆ ಸಲ್ಲಿಸಿರುವುದಾಗಿ ಬರೆದುಕೊಂಡಿದ್ದಾರೆ. ಅವರು ನಿವೃತ್ತರಾದ ಮೇಲೆ ಮರಗೆಲಸ ಉದ್ಯಮ ಆರಂಭ ಮಾಡಿದ್ದರು ಎನ್ನಲಾಗಿದೆ.

ಮೊದಲು ಜೋ ನಂತರ ಕಮಲಾ!

ಜೋ ಬೈಡನ್ ಅವರನ್ನು ಕೊಲೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಪೋಸ್ಟ್​ ಮಾಡಿದ್ದ. ಇದಲ್ಲದೇ ಹತ್ಯೆ ಕುರಿತಾಗಿ 2022 ರ ಸೆಪ್ಟೆಂಬರ್ ಆತ, " ಮೊದಲು ಜೋ ನಂತರ ಕಮಲಾ"! ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದ ಎಂದು ಅಧಿಕಾರಿಗಳು ಹೇಳುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರುರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನೂಕುನುಗ್ಗಲು - ಮಹಿಳೆ ಅಸ್ವಸ್ಥ, ಯುವತಿಗೆ ಕಿರುಕುಳ