LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು

ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ನಡೆದಿದೆ.

ಖಮ್ಮಂ ಜಿಲ್ಲೆಯ ಚಿಂತಕಣಿ ಮಂಡಲದ ಮಟ್ಕೆಪಲ್ಲಿ ನಾಮವರಂ ಗ್ರಾಮದ ಕಟಿಕಳ ರಾಮಕೃಷ್ಣ ದಂಪತಿಗೆ ಮಗಳು ಅಂಜಲಿ ಕಾರ್ತಿಕಾ (9) ಮೃತ ಬಾಲಕಿ.

ಶುಕ್ರವಾರ ಬೆಳಿಗ್ಗೆ ಅಂಜಲಿ ತನ್ನ ತಂದೆಯಿಂದ ಸೆಲ್ ಫೋನ್ ತೆಗೆದುಕೊಂಡು ಸ್ವಲ್ಪ ಸಮಯದವರೆಗೆ ಅದರಲ್ಲಿ ವೀಡಿಯೊಗಳನ್ನು ವೀಕ್ಷಿಸಿದ್ದಾಳೆ. ಈ ವೇಳೆ ಮೊಬೈಲ್ ಚಾರ್ಜ್ ಮುಗಿದ ಕಾರಣಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.
ಮೃತ ಬಾಲಕಿ ಅಂಜಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದಾಳೆ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಆತ್ಮಹತ್ಯೆ ಭಾಗ್ಯ’ ಖಂಡಿಸಿ ವಿಪಕ್ಷ ನಾಯಕರ ಪ್ರತಿಭಟನೆಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್