E-PAPER
17 Nov 2026, 12:22:40 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯಮಕನಮರ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಕಾರ್ಯದ ಸಭೆ ಯಶಸ್ವಿಯಾಗಿ ಸಂಪನ್ನ

ಯಮಕನಮರ್ಡಿ(ಬೆಳಗಾವಿ)18: ಭಾರತೀಯ ಜನತಾ ಪಕ್ಷದ ವತಿಯಿಂದ

ಚಿಕ್ಕೊಡಿ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಸತಿಷ ಅಪ್ಪಾಜಿಗೊಳ ಇವರ ನೆತ್ರುತ್ವದಲ್ಲಿ ಯಮಕನಮರ್ಡಿ ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision - SIR) ಕಾರ್ಯದ ಕುರಿತು ಮಹತ್ವದ ಸಭೆ ಇಂದು ನಡೆಯಿತು. ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವುದರ ಜೊತೆಗೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಸಭೆಯನ್ನು ಆಯೋಜಿಸಲಾಗಿತ್ತು.

ಸಭೆಯ ವೇದಿಕೆಯಲ್ಲಿ ಯಮಕನಮರ್ಡಿ ವಿಧಾನಸಭಾ ಕ್ಷೇತ್ರದ ಎಸ್‌ಐಆರ್ ಪ್ರಭಾರಿ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಕರ್ನಾಟಕ ರಾಜ್ಯ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್, ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾ ಕರ್ನಾಟಕ ರಾಜ್ಯ ಕಾರ್ಯದರ್ಶಿ ಬಸವರಾಜ ಹುಂದ್ರಿ, ಉತ್ತರ ಮಂಡಲ ಅಧ್ಯಕ್ಷ ಶ್ರೀಶೈಲ ಯಮಕನಮರ್ಡಿ, ದಕ್ಷಿಣ ಮಂಡಲ ಅಧ್ಯಕ್ಷ ಅಪ್ಪಯ್ಯ ಜಾಜರಿ, ಕಲಗೌಡ ಪಾಟೀಲ ಹಾಗೂ ಬಿಎಲ್‌ಎ ತಂಡದ ಕಾರ್ಯದರ್ಶಿ ರಾಜೇಂದ್ರ ಮಠಪತಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಗೆ ಸ್ವಾಗತ ಕೋರಿದ ಉತ್ತರ ಮಂಡಲ ಅಧ್ಯಕ್ಷ ಶ್ರೀಶೈಲ ಯಮಕನಮರ್ಡಿ, ಎಸ್‌ಐಆರ್ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಪಕ್ಷದ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ. ಸೋನಾಲಿ ಸರ್ನೋಬತ್ ಅವರು ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮಹತ್ವವನ್ನು ವಿವರಿಸಿದರು. ಬೂತ್ ಲೆವೆಲ್ ಏಜೆಂಟ್ (ಬಿಎಲ್‌ಎ) ತಂಡದ ಜವಾಬ್ದಾರಿಗಳು, ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಅವರ ಪಾತ್ರದ ಕುರಿತು ಸವಿಸ್ತಾರವಾಗಿ ತಿಳಿಸಿದರು. ಪಕ್ಷದ ಬಲವು ಬೂತ್ ಮಟ್ಟದ ಸಂಘಟನೆಯ ಮೇಲೆ ಅವಲಂಬಿತವಾಗಿದ್ದು, ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕೆಂದು ಅವರು ಕರೆ ನೀಡಿದರು.

ಬಿಎಲ್‌ಎ ತಂಡದ ಕಾರ್ಯದರ್ಶಿ ರಾಜೇಂದ್ರ ಮಠಪತಿ ಮಾತನಾಡಿ, ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು. ಬೂತ್ ಮಟ್ಟದ ಕಾರ್ಯಕರ್ತರ ಶ್ರಮ ಮತ್ತು ಸಂಘಟನೆಯೇ ಪಕ್ಷದ ಯಶಸ್ಸಿಗೆ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಕಾರ್ಯಕರ್ತರೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಂಘಟನಾ ಕಾರ್ಯವನ್ನು ಬಲಪಡಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬಸವರಾಜ ಹುಂದ್ರಿ, ಅಪ್ಪಯ್ಯ ಜಾಜರಿ ಸೇರಿದಂತೆ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಎಸ್‌ಐಆರ್ ಕಾರ್ಯದಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಪದಾಧಿಕಾರಿಗಳು, ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಎಸ್‌ಐಆರ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಲಾಯಿತು. ಬಳಿಕ ರಾಷ್ಟ್ರಗೀತೆಯೊಂದಿಗೆ ಸಭೆ ಯಶಸ್ವಿಯಾಗಿ ಸಮಾಪ್ತಿಗೊಂಡಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.