E-PAPER
17 Nov 2026, 12:22:28 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯಶವಂತಪುರ-ಪಂಡರಪುರ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ಹಾಗೂ ರಾಯಬಾಗ ನಿಲ್ದಾಣಗಳಿಗೆ ನಿಲುಗಡೆ ಕಲ್ಪಸುವಂತೆ ಕೇಂದ್ರ ರೈಲ್ವೆ ಸಚಿವರನ್ನು ವಿನಂತಿ:ಈರಣ್ಣ ಕಡಾಡಿ

ಬೆಳಗಾವಿ-೧೪:ಪಂಢರಪುರದ ಪಾಂಡುರಂಗನ ದರ್ಶನಕ್ಕೆ ತೆರಳುವ ಜಿಲ್ಲೆಯ ಭಕ್ತರ ಬಹುದಿನಗಳ ಬೇಡಿಕೆಯಾಗಿದ್ದ ಯಶವಂತಪುರ-ಪಂಡರಪುರ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ಹಾಗೂ ರಾಯಬಾಗ ನಿಲ್ದಾಣಗಳಿಗೆ ನಿಲುಗಡೆ ಕಲ್ಪಸುವಂತೆ ಕೇಂದ್ರ ರೈಲ್ವೆ ಸಚಿವರನ್ನು ವಿನಂತಿಸಲಾಗಿತ್ತು. ನನ್ನ ಮನವಿಯನ್ನು ಪರಿಗಣಿಸಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಈ ಭಾಗದ ಭಕ್ತರಿಗೆ ಅನುಕೂಲ ಕಲ್ಪಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿ ಘಟಪ್ರಭಾ ಮತ್ತು ರಾಯಬಾಗ ನಿಲ್ದಾಣಗಳಲ್ಲಿ ನಿಲುಗಡೆಗೆ ಆದೇಶ ಮಾಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಬುಧವಾರ ಆ-14 ರಂದು ನವದೆಹಲಿಯ ರೈಲು ಭವನದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾಗಿ, ನಿಲುಗಡೆ ಆದೇಶ ಪತ್ರಿಯನ್ನು ಪಡೆದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರೈಲು ಸಂಖ್ಯೆ 16541 ಯಶವಂತಪುರ-ಪಂಡರಪೂರ ಹಾಗೂ ರೈಲು ಸಂಖ್ಯೆ 16542 ಪಂಡರಪೂರ-ಯಶವಂತಪುರ ಈ ರೈಲು ಘಟಪ್ರಭಾ ಹಾಗೂ ರಾಯಬಾಗ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ಪಂಢರಪುರಕ್ಕೆ ಹೊಗುವ ಪ್ರಯಾಣಿಕರು ಈ ರೈಲು ಸೇವೆಯ ಸದುಪಯೋಗ ಪಡಿಸಿಕೊಳ್ಳಕೊಳ್ಳಬೇಕು. ನನ್ನ ಮನವಿಗೆ ಸ್ಪಂದಿಸಿ ಘಟಪ್ರಭಾ ಮತ್ತು ರಾಯಬಾಗ ನಿಲ್ದಾಣಗಳಲ್ಲಿ ನಿಲುಗಡೆಗೆ ಆದೇಶ ನೀಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಈ ಭಾಗದ ಜನತೆಯ ಪರವಾಗಿ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.