LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಜೆ ಪಡೆದು ಪಬ್‍ಗೆ: ಡಿಐಜಿಯಿಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪ

ಪಣಜಿ: ಆರೋಗ್ಯ ಸರಿಯಿಲ್ಲ ಎಂದು ರಜೆ ಪಡೆದು ಪಬ್‍ಗೆ ಹೋಗಿ ಕಂಠಪೂರ್ತಿ ಕುಡಿದು ಉನ್ನತ ಪೋಲಿಸ್ ಅಧಿಕಾರಿಯೊಬ್ಬರು ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದ ಬಾಗಾಟದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಲಭ್ಯವಾಗಿರುವ ಮಾಹಿತಿಯ ಅನುಸಾರ, ಎ ಕೋನ್ ಎಂದು ಗುರುತಿಸಲ್ಪಡುವ ಡಿಐಜಿ ಈ ಹಿಂದೆ ದೆಹಲಿ ಪೋಲಿಸ್ ಇಲಾಖೆಯಲ್ಲಿ ಉನ್ನತ ಹುದ್ಧೆಯಲ್ಲಿದ್ದರು ಎಂದು ವರದಿಯಾಗಿದ್ದು, ಇವರು ಗೋವಾದ ಬಾಗಾದಲ್ಲಿ ಡಿಐಜಿ ಕುಡಿದ ಅಮಲಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಘಟನೆಯ ಸಮಯದಲ್ಲಿ ಎ ಕೋನ್ ರವರು ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಅವರು ಕ್ಲಬ್‍ನಲ್ಲಿ ಯುವತಿಯೊಂದಿಗೆ ಜಗಳವಾಡಿದರು. ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದರು ಎನ್ನಲಾಗಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಿಐಜಿ ಮಹಿಳೆಯೊಂದಿಗೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು ಕೂಡ ಕಾಣಬಹುದಾಗಿದೆ. ಮಹಿಳೆ ಪೋಲಿಸರಿಗೆ ಕಪಾಳಮೋಕ್ಷ ಮಾಡಿದ ಬಳಿಕ ಗಲಾಟೆ ನಡೆದಿದೆ. ಡಿಐಜಿ ರವರು ಘಟನೆಯ ಸಂದರ್ಭದಲ್ಲಿ ವೈದ್ಯಕೀಯ ರಜೆಯಲ್ಲಿದ್ದರು ಎನ್ನಲಾಗಿದೆ. ಈ ಘಟನೆಯ ಮಾಹಿತಿ ಪಡೆದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಸಂಬಂಧಿತ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಗೋವಾ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ಪೋಲಿಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸುಗಳ ಹಸಿರು ಮೇವಿನ ಕೊಠಡಿ ಸ್ಥಾಪಿಸುವುದು ಹೇಗೆ ಗೊತ್ತಾ...? ಇಲ್ಲಿದೆ ನೋಡಿ'ಚುನಾವಣಾ ರಣತಂತ್ರದ ಮಾರ್ಗಸೂಚಿ ಚರ್ಚೆ ಅಗಿದೆ'- ಸಿ.ಟಿ.ರವಿಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪಲು ಇಲಾಖೆ ವತಿಯಿಂದ ಶಿಬಿರ- ಪ್ರಿಯಾಂಕ್ ಖರ್ಗೆಪ್ರಸಾದ ಸೇವಿಸಿ ಅಸ್ವಸ್ಥ ಪ್ರಕರಣ : ಲ್ಯಾಬ್ ರಿಪೋರ್ಟ್ ನಲ್ಲಿ ಬಯಲಾಯಿತು ವಿಷ ಆಹಾರದ ಸತ್ಯ.!'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವು