LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರತನ್ ಟಾಟಾ ಅಗಲಿಕೆಗೆ ಮಾಜಿ ಪ್ರೇಯಸಿ ಸಿಮಿ ಭಾವುಕ ಪೋಸ್ಟ್ ಮೂಲಕ ಸಂತಾಪ

ಮುಂಬೈ :ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ತಮ್ಮ 86 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಎಲ್ಲಾ ಕ್ಷೇತ್ರಗಳ ವ್ಯಕ್ತಿಗಳು ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ಧಾರೆ. ರತನ್ ಟಾಟಾ ಮಾಜಿ ಪ್ರೇಯಸಿ, ಸ್ನೇಹಿತೆ ಸಿಮಿ ಗರೆವಾಲ್ ತನ್ನ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಭಾವುಕ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟಿ ಮತ್ತು ಜನಪ್ರಿಯ ಟಾಕ್ ಶೋ ಹೋಸ್ಟ್ ಸಿಮಿ ಗರೆವಾಲ್ ರತನ್ ಟಾಟಾ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡು ನೀವು ಹೋಗಿದ್ದೀರಿ ಎಂದು ಎಲ್ಲರೂ ಹೇಳುತ್ತಿದ್ದಾರೆ, ನೀವು ನಮ್ಮ ಜೊತೆಗೆ ಇಲ್ಲ ಎನ್ನುವ ಸತ್ಯವನ್ನು ಅರಗಿಸಿಕೊಳ್ಳುವುದು ತುಂಬಾ ಕಷ್ಟ. ಹೋಗಿ ಬನ್ನಿ ನನ್ನ ಗೆಳೆಯ ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರೊಂದಿಗಿನ ಸಂಬಂಧದ ಬಗ್ಗೆ 2011 ರಲ್ಲಿ ನೀಡಿದ ಸಂದರ್ಶನದಲ್ಲಿ ಖ್ಯಾತ ಹಿಂದಿ ಸಿನಿಮಾ ನಟಿ ಸಿಮಿ ಸ್ವತಃ ಬಹಿರಂಗಪಡಿಸಿದ್ದರು. ಆತ್ಮೀಯವಾಗಿದ್ದರೂ ರತನ್ ಹಾಗೂ ಸಿಮಿಯ ಗೆಳೆತನ ಹೆಚ್ಚು ದಿನ ಉಳಿಯಲಿಲ್ಲ, ಸಿಮಿ ಬೇರೊಬ್ಬರನ್ನು ಮದುವೆಯಾದರು, ಸಾಕಷ್ಟು ವರ್ಷಗಳ ಕಾಲ ಸಿಮಿ ಹಾಗೂ ರತನ್ ಒಳ್ಳೆಯ ಸ್ನೇಹಿತರಾಗಿದ್ದರು. ಸಂದರ್ಶನವೊಂದರಲ್ಲಿ ಸ್ವತಃ ರತನ್ ಟಾಟಾ ಅವರು ನಾಲ್ಕು ಬಾರಿ ಪ್ರೀತಿಯಲ್ಲಿ ಬಿದ್ದಿದ್ದರೂ ಅದು ಮದುವೆಯ ಹಂತವನ್ನು ತಲುಪಲಿಲ್ಲ ಎಂದು ಬಹಿರಂಗಪಡಿಸಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ - ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯಸ್ಪೀಕರ್‌ ಯುಟಿ ಖಾದರ್‌ಗೆ ಭೂಗತ ಜಗತ್ತಿನಿಂದ ಜೀವ ಬೆದರಿಕೆಸುಹಾಸ್ ಶೆಟ್ಟಿ ಪ್ರಕರಣ: ತನಿಖೆಯನ್ನು NIAಗೆ ವರ್ಗಾಯಿಸಲು ಆಗ್ರಹಮಂಗಳೂರು: ಸುಹಾಸ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಯುವಕನಿಗೆ ಚೂರಿ ಇರಿತ!ಕೇರಳದಲ್ಲಿ ವಿಳಿಂಜಂ ಅಂತಾರಾಷ್ಟ್ರೀಯ ಬಂದರನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿಮಂಗಳೂರಿನಲ್ಲಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ..!ಪಾಕ್ ಪ್ರಜೆಗಳು ಭಾರತ ತೊರೆಯಲು ಗಡುವು ವಿಸ್ತರಣೆSSLC Result 2025 ಪ್ರಕಟ- ವಿದ್ಯಾರ್ಥಿಗಳ ಫಲಿತಾಂಶ ಇಲ್ಲಿ ಚೆಕ್ ಮಾಡಿಮಂಗಳೂರು: ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಎಂಬ ಪೋಸ್ಟ್ ವೈರಲ್!ಮಂಗಳೂರು : ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ- ಮೇ 6ರ ವರೆಗೆ ನಿಷೇಧಾಜ್ಞೆ ಜಾರಿ