LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಷ್ಯಾ ವಿರುದ್ಧ ಯುದ್ಧ ನಡೆಸಲು ಉಕ್ರೇನ್‌ಗೆ ಜೋ ಬೈಡನ್ ಅನುಮತಿ

ವಾಷಿಂಗ್ಟನ್ : ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ.

ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುತ್ತೇನೆ ಎಂದು ನಿಯೋಜಿತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದರು. ಈ ಮಧ್ಯೆ ಇನ್ನೆರಡು ತಿಂಗಳು ಅಧಿಕಾರದಲ್ಲಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ರಷ್ಯಾ ಮೇಲೆ ಕ್ಷಿಪಣಿ ದಾಳಿ ನಡೆಸಲು ಉಕ್ರೇನ್‌ಗೆ ಅನುಮತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಯುದ್ಧ ಮತ್ತಷ್ಟು ತೀವ್ರಗೊಳ್ಳಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ.

ಈ ಹಿಂದೆ ಅಮೆರಿಕ ಉಕ್ರೇನ್‌ಗೆ ದೂರ ಸಾಗಬಲ್ಲ ಕ್ಷಿಪಣಿಯನ್ನು ನೀಡಿತ್ತು. ಆದರೆ ಈ ಕ್ಷಿಪಣಿಯನ್ನು ಬಳಸದಂತೆ ನಿಬ ನಿರ್ಬಂಧಿಸಿತ್ತು. ಎರಡು ತಿಂಗಳು ಅಧಿಕಾರದಲ್ಲಿರುವ ಜೋ ಬೈಡೆನ್ ಅವರು ತಮ್ಮ ಅಧಿಕಾರದ ಕೊನೆ ಅವಧಿಯಲ್ಲಿ ಕ್ಷಿಪಣಿಗೆ ವಿಧಿಸಿದ್ದ ನಿರ್ಬಂಧವನ್ನು ತೆಗೆದುಹಾಕಿದ್ದಾರೆ.

ಮುಂಬರುವ ದಿನಗಳಲ್ಲಿ ಉಕ್ರೇನ್ ತನ್ನ ಮೊದಲ ದೀರ್ಘ-ಶ್ರೇಣಿಯ ದಾಳಿಯನ್ನು ನಡೆಸಲು ಯೋಜಿಸಿದೆ. ಮೂಲಗಳ ಪ್ರಕಾರ 190 ಮೈಲುಗಳವರೆಗೆ (306 ಕಿಮೀ) ವ್ಯಾಪ್ತಿಯನ್ನು ಹೊಂದಿರುವ ಎಟಿಎಸಿಎಂಎಸ್ ರಾಕೆಟ್‌ಗಳನ್ನು ಬಳಸಿಕೊಂಡು ಉಕ್ರೇನ್ ಮೊದಲ ದಾಳಿಯನ್ನು ನಡೆಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!