LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜಕೀಯ ಸಮಾವೇಶ ನಡೆಯುತ್ತಿರುವಾಗ ತನ್ನನ್ನು ಸ್ಫೋಟಿಸಿಕೊಂಡ ಆತ್ಮಾಹುತಿ ಬಾಂಬರ್

ಇಸ್ಲಾಮಾಬಾದ್ : ವಾಯುವ್ಯ ಪಾಕಿಸ್ಥಾನದಲ್ಲಿ ಭಾನುವಾರ ಸಂಜೆ ಇಸ್ಲಾಮಿಕ್ ಪಕ್ಷದ ರಾಜಕೀಯ ಸಮಾವೇಶದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 44 ಜನ ಸಾವನ್ನಪ್ಪಿದ್ದಾರೆ ಮತ್ತು 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್(ಜೆಯುಐ- ಎಫ್) ಪಕ್ಷದ ರಾಜಕೀಯ ಸಮಾವೇಶದಲ್ಲಿ ಈ ಭೀಕರ ಸ್ಫೋಟ ನಡೆದಿದೆ. ಅಫ್ಘಾನಿಸ್ತಾನ ಗಡಿ ಸಮೀಪವಿರುವ ಪತ್ತೂನ್‌ಗ್ವಾ ಪ್ರಾಂತ್ಯದ ಖಾರ್ ಪಟ್ಟಣದಲ್ಲಿ ನಡೆದ ಈ ಸಮಾವೇಶದಲ್ಲಿ 400ಕ್ಕೂ ಹೆಚ್ಚು ಸದಸ್ಯರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.ಇದೊಂದು ಆತ್ಮಾಹುತಿ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೂ ಯಾವುದೇ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಆದರೆ ಐಸಿಸ್

ಸಂಘಟನೆಯ ಸ್ಥಳೀಯ ಘಟಕ ಇತ್ತೀಚೆಗೆ ಜೆಯುಐ-ಎಫ್ ಮೇಲೆ ದಾಳಿಗಳನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಇದು ಐಸಿಸ್ ಕೃತ್ಯ ಎಂದು ಶಂಕಿಸಲಾಗಿದೆ. ಉಲೇಮಾ-ಎ-ಇಸ್ಲಾಂ-ಎಫ್ ಪಕ್ಷದ ಕೆಲವು ಮುಖಂಡರು ಕೂಡ ಸ್ಫೋಟದಲ್ಲಿ ಸಾವಿಗೀಡಾಗಿದ್ದಾರೆ. ಆಸ್ಪತ್ರೆಯಲ್ಲಿರುವ ಹಲವು ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿಯಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭ