LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಜಭವನದ ದುರ್ಬಳಕೆ ಮಾಡಿ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚು'- ಸಿಎಂ ಕಿಡಿ

ಬೆಂಗಳೂರು:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಇದರ ಬೆನ್ನಲ್ಲೇ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕಾ ಹೇಳಿಕೆ ನೀಡಿದ್ದು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ.ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ.ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ತಿಳಿಸಿದ್ದಾರೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದಿದ್ದಾರೆ.

ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ:

ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದರು.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ.ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.

ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.

ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು.

ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ.ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!