LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ ಝೀರೊ ಕರೆಂಟ್; ನವೆಂಬರ್ ಗೆ ಕತ್ತಲೆಗೆ ಕರ್ನಾಟಕ : ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ ಅವರ ನೇತರತ್ವದಲ್ಲಿ ಸರ್ಕಾರದ ವಿರುದ್ದ ರಣಕಹಳೆ ಊದಿದ್ದೇವೆ.‌ ಇದನ್ನು ಮುಂದಿನ ಒಂದುವರ್ಷ ರಾಜ್ಯದ ಎಲ್ಲ ಮನೆಗಳಿಗೆ ತಲುಪಿಸಿ ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಹೋರಾಟ ಆರಂಭಿಸಿದ್ದೇವೆ ಎಂದರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನವರು, ಗ್ಯಾರೆಂಟಿಗಳ ಹೆಸರಿನಲ್ಲಿ ಸಹಿ ಮಾಡಿ ಕೊಟ್ಟರು, ಅದರೆ, ಈಗ ಯಾವುದೂ ಸಮರ್ಪಕ ಜಾರಿಮಾಡಿಲ್ಲ. ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಇವರು ಕೊಡುತ್ತಿರುವ ಐದು ಕೆಜಿ ಅಕ್ಕಿ ನರೇಂದ್ರ ಮೋದಿಯವರು ಕೊಡುತ್ತಿದ್ದಾರೆ. ಅಕ್ಕಿ ಬದಲು ಹಣ ಕೊಡುತ್ತೇವೆ ಅಂತ ಹೇಳಿ, ಗ್ರಾಮೀಣ ಮಹಿಳೆಯ ಅರ್ಧ ದಿನದ ಕೂಲಿಯಷ್ಟು ಹಣ ಕೊಡುತ್ತಿಲ್ಲ. ಅನ್ನ ಭಾಗ್ಯದಲ್ಲಿ ದ್ರೋಹ ಮಾಡಿದ್ದಾರೆ‌ ಎಂದು ವಾಗ್ದಾಳಿ ನಡೆಸಿದರು.

ನವೆಂಬರ್ ಗೆ ರಾಜ್ಯ ಕತ್ತಲೆ
ರಾಜ್ಯದಲ್ಲಿ 200 ಯುನಿಟ್ ಫ್ರೀ ಕರೆಂಟ್ ಕೊಡುವುದಾಗಿ ಹೇಳಿ ಈಗ ರಾಜ್ಯದಲ್ಲಿ ಕರೆಂಟ್ ಸಿಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಝಿರೊ ಕರೆಂಟ್ ಝಿರೊ ಬಿಲ್ ಯೋಜನೆ ಜಾರಿಗೆ ಬರುತ್ತದೆ. ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ನವೆಂಬರ್ ನಿಂದ ರಾಜ್ಯದಲ್ಲಿ ಕತ್ತಲೆ ಆವರಿಸುತ್ತದೆ ಎಂದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ತಿಂಗಳಲ್ಲಿ ಭ್ರಷ್ಟಾಚಾರ ಜೋರಾಗಿದೆ. ಅಧಿಕಾರಿಗಳ ಹುದ್ದೆ ಹರಾಜು ಆಗುತ್ತಿವೆ. ವಿಧಾನಸೌಧ, ಕುಮಾರಕೃಪಾದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಅಂತ ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ. ಬೆಂಗಳೂರಿನ ಹೊರ ವಲಯದ ಅಧಿಕಾರಿ ವರ್ಗಾವಣೆಗೆ 8 ಕೊಟ್ಟವನು ಬಿಟ್ಟು ಹೋದ ಮೇಲೆ ಅದೇ ಹುದ್ದೆಗೆ 13 ಕೋಟಿಗೆ ಹರಾಜಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕರ್ತರನ್ನು ಸಣ್ಣ ಪುಟ್ಟ ವಿಷಯಗಳಿಗೆ ಬಂಧನ ಮಾಡುತ್ತಿದ್ದಾರೆ. ಹಾಸನದ ಕಾರ್ಯಕರ್ತರನ್ನು ಬೆಂಗಳೂರಿಗೆ ತಂದು ವಿಚಾರಣೆ ನಡೆಸುತ್ತಿದ್ದಾರೆ‌. ಪೊಲಿಸ್ ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡಬೇಕು. ಮೂರು ತಿಂಗಳಲ್ಲಿ 172 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂತ್ರಿಗಳು ರೈತರು ಐದು ಲಕ್ಷ ಪರಿಹಾರಕ್ಕಾಗಿ ಸಾಯುತ್ತಾರೆ ಎಂದು ಹೇಳಿದ್ದಾರೆ. ಯಾರಾದರೂ ರೈತರು ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ ? ಯಡಿಯೂರಪ್ಪ ಅವರ ಕಾಲದಲ್ಲಿ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಪ್ರಧಾನಮಂತ್ರಿ ‌ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ರೈತರಿಗೆ ನಾಲ್ಕು ಸಾವಿರ ರೂ ಕೊಡುವುದನ್ನು ನಿಲ್ಲಿಸಿದ್ದಾರೆ. ನಾನು ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆ ರದ್ದುಪಡಿಸಿದ್ದಾರೆ ಎಂದರು

ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ನೀಚರು ಅಂತ ಹೇಳುತ್ತಾರೆ. ನೀವು ಒಂದು ಅಗಳು ಅಕ್ಕಿಯನ್ನು ನೀಡಿಲ್ಲ. ಜನರಿಗೆ ಅಕ್ಕಿ ಕೊಡುತ್ತಿರುವ ಮೋದಿಯವರು ನೀಚರಾ? ಒಂದು ಕಾಳು ಅಕ್ಕಿ ಕೊಡದ ನಿವು ನೀಚರಾ ಅಂತ ರಾಜ್ಯದ ಜನರು ಲೋಕಸಭೆ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ, ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು ಶಾಸಕರು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!