ರಾಜ್ಯದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ.!
ಬೆಂಗಳೂರು: ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಸಾಧಾರಣ ಮಲೆಯಾಗಲಿದೆ, ಸೆಪ್ಟೆಂಬರ್ 13ರ ನಂತರ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.