ರಾಜ್ಯದ ಮುಂದಿನ ಎರಡು ಗಂಟೆಗಳಲ್ಲಿ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ.!
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಮುಂದಿನ ಎರಡು ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 30-40ಕಿ.ಮೀ ಇರಲಿದೆ.
ಕೆಲ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನದ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಹಾಸನ, ಧಾರವಾಡ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.