LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ರೈತರಿಗೆ ಕೇಂದ್ರದಿಂದ ಗಣೇಶ ಹಬ್ಬದ ಗಿಫ್ಟ್..! ಕೇಂದ್ರ ಸಚಿವ ಜೋಶಿ

ನವದೆಹಲಿ/ ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ. "ಹೆಸರು ಮತ್ತು ಸೂರ್ಯಕಾಂತಿ"ಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ "ಉದ್ದು ಮತ್ತು ಸೋಯಾಬೀನ್" ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29)ಆದೇಶ ಹೊರಡಿಸಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಉದ್ದಿನ ಕಾಳು 7400 ರೂ. ಮತ್ತು ಸೋಯಾಬಿನ್ ಗೆ 4892 ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಕಳೆದ ವರ್ಷ 6950 ರು. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರೂ. ಹೆಚ್ಚಳ ಕಂಡಿದೆ. 4600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರೂ. ಹೆಚ್ಚಳವಾಗಿದೆ. ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತಕ್ಷಣವೇ ರಾಜ್ಯದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದ ರೈತರ ಸಂಕಷ್ಟಕ್ಕೆ ಪ್ರಧಾನಿ ಸ್ಪಂದನೆ: ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಹೇಳಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿ