LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.!

 

ಬೆಂಗಳೂರು :  ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಳೆ, ನಾಡಿದ್ದು ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬೀದರ್​ ಮತ್ತು ಬಾಗಲಕೋಟೆಯಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 23 ರ ಇಂದು ಸೆ.24 ನಾಳೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀಈ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST