LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ 7 ಮಂದಿ ಸೇರಿ ದೇಶದ 463 ಸಿಬ್ಬಂದಿಗೆ ಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕ ಪ್ರಶಸ್ತಿ ಘೋಷಣೆ

ನವದೆಹಲಿ : ಅನುಕರಣೀಯ ಸೇವೆ ಗುರುತಿಸಿ, ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಕೇಂದ್ರ ಪೊಲೀಸ್ ಸಂಸ್ಥೆಗಳ 463 ಸಿಬ್ಬಂದಿಗೆ ಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕ' ಪ್ರಶಸ್ತಿ ಘೋಷಿಸಲಾಗಿದೆ.

ವಿವಿಧ ಭದ್ರತಾ ಪಡೆಗಳಲ್ಲಿರುವ ಪೊಲೀಸ್ ಅಧಿಕಾರಿಗಳ ಅತ್ಯುತ್ತಮ ಸೇವೆ, ಕೊಡುಗೆಗಳನ್ನು ಗುರುತಿಸಲು, ವೃತ್ತಿಪರ ಗುಣಮಟ್ಟವನ್ನು ಉತ್ತೇಜಿಸುವ ಉದ್ದೇಶದಿಂದ ನೀಡುವ ಪ್ರತಿಷ್ಠಿತ ಪದಕ ಇದಾಗಿದೆ. ದೇಶದ ವಿವಿಧ ಭದ್ರತಾ ಪಡೆಗಳಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗಿದೆ. ಈ ಪೈಕಿ ಕರ್ನಾಟಕದ 6 ಪೊಲೀಸ್ ಅಧಿಕಾರಿಗಳು ಹಾಗೂ ಓರ್ವ ಎಫ್‌ಎಸ್‌ಎಲ್ ಅಧಿಕಾರಿಗೂ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಅಧಿಕಾರಿಗಳಾದ ಡಿವೈಎಸ್ಪಿ, ಐಎಸ್ಡಿ ಬಸವರಾಜ್, ಬೆಂಗಳೂರು ನಗರ ಎಸಿಪಿ ರಮೇಶ್ ವಿ.ಎಲ್, ರಾಯಚೂರು ಜಿಲ್ಲೆ ಇನ್ಸ್ಪೆಕ್ಟರ್ ಉಮೇಶ್ ಕಾಂಬ್ಲೇ, ಸಿಐಡಿ ಇನ್ಸ್ಪೆಕ್ಟರ್ ನರೇಂದ್ರ ಬಾಬು, ಹಾಸಜನ ಜಿಲ್ಲೆ ಇನ್ಸ್ಪೆಕ್ಟರ್ ವಸಂತ ಕೆ.ಎಂ, ಉತ್ತರಕನ್ನಡ ಜಿಲ್ಲೆಯ ಇನ್ಸ್ಪೆಕ್ಟರ್ ರಮೇಶ್ ಹೆಚ್ ಹನಾಪುರ್, ಬೆಳಗಾವಿ ಜಿಲ್ಲೆಯ ಡಾ.ಪ್ರವೀಣ್ ಸಂಗ್ನಲ್ ಮಠ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುತ್ತಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಜಾಗ ಖರೀದಿಸಿದ ಕಿಚ್ಚ ಸುದೀಪ್ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆಸ್ಫೋಟಕ ತಿರುವು ಪಡೆದುಕೊಂಡ ಧರ್ಮಸ್ಥಳ ಪ್ರಕರಣಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!