LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ, ಬುಲೆಟ್ ಪ್ರೂಫ್ ಕಾರು ನೀಡಿದ ಕೇಂದ್ರ ಗುಪ್ತಚರ ಇಲಾಖೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದೀಗ ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯು ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ ನೀಡಿದೆ. ಜೊತೆಗೆ ಬುಲೆಟ್ ಪ್ರೂಫ್ ಕಾರು ತರಿಸಿಕೊಂಡಿರುವ ಅವರು, ಆಗಸ್ಟ್ 29ರವರೆಗೆ ಎಲ್ಲ ಸಾರ್ವಜನಿಕ ಕಾರ್ಯಕ್ರಮ ಮುಂದೂಡಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಷ್ಟು ದಿನಗಳ ಕಾಲ ಇನೋವಾ ಕಾರಿನಲ್ಲಿ ಓಡಾಡುತ್ತಿದ್ದರು. ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯಲ್ಲಿ ಅವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಲ್ಲದೇ, ಬಾಂಗ್ಲಾದೇಶ ಪ್ರಧಾನಿಯಂತೆ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಕೆಲವರು ಹೇಳಿಕೆಗಳನ್ನು ನೀಡಿದ್ದರು. ಜೊತೆಗೆ ಕೆಲ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಎಚ್ಚರಿಕೆಯನ್ನೂ ನೀಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ ಒದಗಿಸುವ ಬೆಳವಣಿಗೆ ನಡೆದಿದೆ.

ರಾಜ್ಯಪಾಲರ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಎಮೆಲ್‌ಸಿ ಐವನ್ ಡಿಸೋಜಾ ಅವರು, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಎಚ್ಚರಿಕೆ ನೀಡಿದ್ದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರ