E-PAPER
17 Nov 2026, 12:18:24 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ರಿಕಾ ಗೋಷ್ಠಿ

ಬೆಳಗಾವಿ-09 : ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಇದೇ ತಿಂಗಳ 25ರಂದು ಮುಕ್ತಾಯಗೊಳ್ಳಲಿದ್ದು, ನೂತನ ರಾಜ್ಯಸಭಾ ಸದಸ್ಯರಾಗಿ ಧಾರವಾಡದ ಹಾಲುಮತದ ಎಂ. ನಾಗರಾಜ್ ಅವರನ್ನು ಆಯ್ಕೆ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷವು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡುವ ಪರಂಪರೆಯನ್ನು ಮುಂದುವರಿಸಿದ್ದು, ಎಂ. ನಾಗರಾಜ್ ಅವರ ಜೊತೆಗೆ ವಿಧಾನಪರಿಷತ್ತಿಗೆ ಲಿಂಗಾಯತ ಸಮಾಜದ ಲಿಂಗರಾಜ್ ಪಾಟೀಲ್ ಹಾಗೂ ಮೈಸೂರಿನ ಮಡಿವಾಳ ಸಮಾಜದ ರಘು ಕೌಟಿಲ್ಯ ಅವರನ್ನು ಆಯ್ಕೆ ಮಾಡಿರುವುದು ಸಂತಸದ ವಿಷಯ ಎಂದು ಹೇಳಿದರು.
ತಾವು ಕೂಡ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷದಲ್ಲಿ ಬೆಳೆದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿ.ಎಲ್. ಸಂತೋಷ, ಪ್ರಹ್ಲಾದ ಜೋಶಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.
ತಮ್ಮ ಆರು ವರ್ಷಗಳ ಅವಧಿಯಲ್ಲಿ ₹23.53 ಕೋಟಿ ಅನುದಾನದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ ಅವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿಡುವ ಹಾಗೂ ಅವರ ಪ್ರತಿಮೆ ಸ್ಥಾಪಿಸುವ ಯೋಜನೆ ಅಂತಿಮ ಹಂತದಲ್ಲಿದೆ ಎಂದರು.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರ ನಿರ್ಣಯ ಅಂಗೀಕಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದು ಸರ್ವಕಾಲಿಕ ಸತ್ಯ. ಅದನ್ನು ಮತ್ತೆ ಮತ್ತೆ ಒತ್ತಿ ಹೇಳುವ ಅಗತ್ಯವಿಲ್ಲ. ಮಹಾನಗರ ಪಾಲಿಕೆಯಲ್ಲಿ ಉಂಟಾಗಿರುವ ತಾಂತ್ರಿಕ ಅಡಚಣೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಈ ವಿಷಯವನ್ನು ಮಹಾಪೌರರು, ಉಪಮಹಾಪೌರರು ಹಾಗೂ ಶಾಸಕರು ಚರ್ಚಿಸಿ ನಿರ್ಧರಿಸಲಿದ್ದಾರೆ”ಎಂದು ಹೇಳಿದರು.
ಈ ವೇಳೆ ನಗರಸೇವಕ ರಾಜಶೇಖರ ಡೋಣಿ, ಈರಯ್ಯಾ ಖೋತ್, ಬಾರಕರ್, ಮಹಾದೇವ ರಾಥೋಡ್, ಸಿದ್ಧನಗೌಡ ಪಾಟೀಲ, ಸೇರಿದಂತೆ ಹಲವರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.