LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ-ಪ್ರಲ್ಹಾದ್ ಜೋಶಿ

ಬೆಂಗಳೂರು : ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು.

ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು. ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದ್ದಾಗಿ ತಿಳಿಸಿದ್ದಾರೆ.

ಇದ್ದ ವಕ್ಫ್ ಆಸ್ತಿಯನ್ನು ಕಾಂಗ್ರೆಸ್ಸಿನ ಹಿರಿಯ ನಾಯಕರು ಲೂಟಿ ಮಾಡಿದ್ದರು. ಬಾಡಿಗೆ, ಲೀಸ್ ಮೂಲಕ ಸಾವಿರಾರು ಕೋಟಿ ಹಣ ಪಡೆಯುತ್ತಿದ್ದರು. ಇರುವ ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ನಾವು ಹೇಳಿದ್ದೆವು. ಈಗ ವಕ್ಫ್ ಛೂ ಬಿಟ್ಟಿದ್ದಾರೆ; ನೂರಾರು ವರ್ಷಗಳ ಮಂದಿರ, ಮಠ ಹೊಡೆಯಲು ಮುಂದಾಗಿದ್ದಾರೆ. ವಿಜಯಪುರ ಜಿಲ್ಲೆಯ ಪಡಗಾನೂರು ಗ್ರಾಮದಲ್ಲಿ ಚಾಲುಕ್ಯರು ಕಟ್ಟಿದ 1500 ವರ್ಷಗಳ ಹಿಂದಿನ ದೇವಸ್ಥಾನ ವಕ್ಫ್ ಎಂದು ಘೋಷಿಸಿದ್ದಾರೆ ಎಂದು ಆರೋಪಿಸಿದರು.

ಕೇವಲ ಕಾಲಂ ನಂಬರ್ 11ರಲ್ಲಿ ದಾಖಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು. ಕೇಳಿದರೆ ಸಮರ್ಪಕ ಉತ್ತರ ಸಿಗಲಿಲ್ಲ ಎಂದು ಆಕ್ಷೇಪಿಸಿದರು.

ಸೇಲ್ ಡೀಡ್ ಇಲ್ಲದೆ ವಕ್ಫ್ ಷಡ್ಯಂತ್ರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ಹೊಂದಿದೆ. ಫಾರೂಕ್ ಅಬ್ದುಲ್ಲ ಭಯೋತ್ಪಾದಕರನ್ನು ಕೊಲ್ಲಬಾರದು ಎನ್ನುತ್ತಿದ್ದಾರೆ. ಪಾಕ್ ಜೊತೆ ಮಾತುಕತೆ ಮಾಡಲು ಕೋರುತ್ತಾರೆ. ಅವರ ಜೊತೆ ಇಂಡಿ ಒಕ್ಕೂಟ ಇದೆ. ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಭ್ರಮಣೆ ಆಗಿದೆಯೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ತುಷ್ಟೀಕರಣದ ಈ ನೀತಿಯನ್ನು ವಿರೋಧಿಸುತ್ತೇನೆ; ಕಾಂಗ್ರೆಸ್ ಇಲ್ಲಿ ಗೆದ್ದರೆ ನಿಮ್ಮ ಮನೆಗಳನ್ನೂ ವಕ್ಫ್ ಆಸ್ತಿ ಎನ್ನಬಹುದು ಎಂದು ಎಚ್ಚರಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ವಿಧಾನ ಮಂಡಲ ಕಲಾಪ ಹಲವು ವಿಷಯಗಳ ಬಗ್ಗೆ ಚರ್ಚೆ.!ವಾಹನ ಸಾವರಾರು ಗಮನಿಸ ಬೇಕಾದ ಸುದ್ದಿ.! ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್ ಬಗ್ಗೆ ಹೆಚ್ಚಿನ ಮಾಹಿತಿ.!ವಚನ: --ಚೆನ್ನಬಸವಣ್ಣ .!ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!