ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!
ಬೆಂಗಳೂರು: ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಮಲೆನಾಡಿನ ಚಿಕ್ಕಮಗಳೂರಿನಲ್ಲೂ ಚಳಿಯ ವಾತಾವರಣ ಯಥಾಸ್ಥಿತಿ ಮುಂದುವರೆದಿದೆ. ಬೆಂಗಳೂರು, ಮೈಸೂರು ಭಾಗದಲ್ಲೂ ಚಳಿ ಮುಂದುವರೆದಿದ್ದು, ಮುಂದಿನ ವಾರವೂ ಚಳಿ ಇರಲಿದೆ. ತೆಲಂಗಾಣ ಭಾಗದಲ್ಲಿ ಕನಿಷ್ಠ ಉಷ್ಣಾಂಶ ಪ್ರಮಾಣದಲ್ಲಿ ಭಾರೀ ಕುಸಿತ ಕಂಡುಬಂದಿದ್ದು ಅಧಿಕ ಚಳಿ ಪ್ರಭಾವ ಕರ್ನಾಟಕದ ಬೀದರ್ ಜಿಲ್ಲೆ ಮೇಲೂ ಆಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.