ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ದಾವಣಗೆರೆ:ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಡಿ ಸರ್ಕಾರದ ಸೇವಾ ಸಿಂಧು ಪೋರ್ಟ್‍ಲ್ https://sevasindhu.karnataka.gov.in ಅಂತರಜಾಲ ಜಾಲತಾಣದಲ್ಲಿ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್. ಬೆಂಗಳೂರು ಒನ್ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೆ.21 ರವರೆಗೆ ಅರ್ಜಿ ಸಲ್ಲಿಸುವ್ಯದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ., ಎಂ.ಸಿ.ಸಿ.“ಬಿ” ಬ್ಲಾಕ್, ಕುವೆಂಪು ನಗರ, 14 ನೇ ಮುಖ್ಯರಸ್ತೆ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.