LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ವಕ್ಫ್ ಮಂಡಳಿಯನ್ನು ಮುಚ್ಚುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ಆಗ್ರಹ.!

 

ಚಿತ್ರದುರ್ಗ : ರೈತರ ಜಮೀನುಗಳನ್ನು ಕಬಳಿಸಲು ಹೊರಟಿರುವ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯನ್ನು ಮುಚ್ಚುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ನಾಡಿನಾದ್ಯಂತ ರೈತರ ಜಮೀನುಗಳಿಗೆ ಈಗಾಗಲೆ ನೋಟಿಸ್ ನೀಡಿರುವ ವಕ್ಫ್ ಮಠ ಮಾನ್ಯ, ಚರ್ಚ್, ದೇವಸ್ಥಾನ, ದರ್ಗಾಗಳ ಜಾಗವನ್ನು ಕಬಳಿಸುವ ಹುನ್ನಾರ ನಡೆಸುತ್ತಿದೆ. ಇದರಿಂದ ತಲ ತಲಾಂತರದಿಂದ ಭೂಮಿಯನ್ನು ಉಳುಮೆ ಮಾಡಿಕೊಂಡು ಬದುಕುತ್ತಿರುವವರು ಬೀದಿಗೆ ಬಿದ್ದಂತಾಗುತ್ತದೆ. ವಸತಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅಧಿಕಾರಿಗಳನ್ನು ಬೆದರಿಸಿ ಪಹಣಿಯಲ್ಲಿ ವಕ್ಫ್ ಎಂದು ದಾಖಲಿಸುವಂತೆ ತಾಕೀತು ಮಾಡುತ್ತಿರುವುದರಿಂದ ಕೂಡಲೆ ವಕ್ಫ್ ಸಚಿವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಎಂ. ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಉಪಾಧ್ಯಕ್ಷ ಶರೀಫ್, ಕಾರ್ಮಿಕ ಘಟಕದ ಅಧ್ಯಕ್ಷ ಫೈಜುಲ್ಲಾ

ನಗರಾಧ್ಯಕ್ಷ ರಾಮು ಎನ್. ಯುವ ಘಟಕದ ಅಧ್ಯಕ್ಷ ಅನಿಲ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಎಂ.ಮಂಜುನಾಥ್, ಶಿವರಾಜ್, ನಂದಕುಮಾರ್ ಮಲ್ಲಿಕಾರ್ಜುನ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!ಶಿಕ್ಷಕರಿಗೆ ಮಾಹಿತಿ.! ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ.!ಚಿತ್ರದುರ್ಗ : ಮಹಾನಗರ ಪಾಲಿಕೆಯನ್ನಾಗಿಸಲು ನಕಾಶೆ ತಯಾರಿ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ.!