LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರಕಾರದಲ್ಲಿ ಖುರ್ಚಿ ಕಿತ್ತಾಟ : ಅಭಿವೃದ್ಧಿ ಶೂನ್ಯ.! ಬಸವರಾಜ ಬೊಮ್ಮಾಯಿ

 

ಹಾವೇರಿ: ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಿಳುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ.

ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್‌ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ, ಸಲೀಂ ಅಹ್ಮದ್‌ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಏನು ಆಗುತ್ತೆ..?

ಮಂತ್ರಿ ಮಂತ್ರಿಗಳ ನಡುವೆ ಏನಾಗುತ್ತದೆ.? ಸಿಎಂ, ಡಿಸಿಎಂ ನಡುವೇ ಏನಾಗುತ್ತಿದೆ ಎಂದು ತಿಳಿದು ಕೊಳ್ಳಲಿ ಅವರಿಗೆ ಎಲ್ಲವು ಗೊತ್ತಿದ್ದು ಹೀಗೆ ಹೇಳುತ್ತಿದ್ದಾರೋ ಅಥವಾ ಅವರ ಗಮನಕ್ಕೆ ಇಲ್ಲವೊ ನನಗೆ ಗೊತ್ತಿಲ್ಲಾ ಸಲೀಂ ಅಹ್ಮದ್‌ ಬಗ್ಗೆ ನನಗೆ ಕನಿಕರ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದ್ದರೂ ಹೀಗೆ ಹೇಳಿದರೆ ನಾನು ಏನು ಹೇಳಲಿ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST