LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಮನಗರದ ಹೆಸರು ಬದಲಾಯಿಸದಂತೆ ಸಿಎಂಗೆ ಸಂಸದ ಡಾ.ಮಂಜುನಾಥ್ ಪತ್ರ

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾಯಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಪತ್ರ ಬರೆದಿದ್ದಾರೆ.

ಅಭಿವೃದ್ಧಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲಾಗುತ್ತದೆ ಎಂಬ ವಿಚಾರಗಳು ಇತ್ತೀಚೆಗೆ ಕೇಳಿ ಬರುತ್ತಿದ್ದು, ಜಿಲ್ಲೆಯ ಹೆಸರು ಬದಲಾಯಿಸುವ ಪ್ರಸ್ತಾವನೆಯನ್ನು ಪರಿಗಣಿಸದಂತೆ ನೂತನ ಸಂಸದರು ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾಗಿದ್ದ ಕೆಂಗಲ್ ಹನುಮಂತಯ್ಯನವರು ಜಿಲ್ಲೆಯ ಹೆಸರನ್ನು ಕ್ಲೋಸ್ ಪೇಟೆಯಿಂದ ರಾಮನಗರ ಎಂದು ಬದಲಾಯಿಸಿದ್ದಾರೆ. ರಾಮನಗರ ಎಂಬ ಹೆಸರಿನಲ್ಲಿ ಅಲ್ಲಿನ ಜನರಿಗೆ ಒಂದು ಭಾವನಾತ್ಮಕ ನಂಟಿದೆ. ರಾಮನಗರದಲ್ಲಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಾಗೂ ಆದಿಚುಂಚುನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟಿದ್ದು, ನಾಡಪ್ರಭು ಕೆಂಪೇಗೌಡ ಕೂಡ ಈ ಭಾಗದವರೇ ಆಗಿದ್ದಾರೆ. ರಾಮನಗರವು ಈ ರಾಜ್ಯಕ್ಕೆ ಐವರು ಸಿಎಂಗಳ ಕೊಡುಗೆ ನೀಡಿದೆ ಎಂಬುವುದು ಗಮನಾರ್ಹ.

ರಾಮನಗರಕ್ಕೆ ತನ್ನದೇ ಆದ ಧಾರ್ಮಿಕ ಇತಿಹಾಸವಿದ್ದು , ಕಣ್ವ ಮಹರ್ಷಿಯ ಸ್ಥಳ ಮತ್ತು ರಾಮಗಿರಿ ಬೆಟ್ಟದಲ್ಲಿ ರಾಮನು ತಂಗಿದ್ದ ಎಂಬ ಪ್ರತೀತಿಯೂ ಇದೆ. ಜೆಡಿಎಸ್ ನಾಯಕ ಎಚ್‌ಡಿ ದೇವೇಗೌಡರು ಈ ಕ್ಷೇತ್ರದಿಂದಲೇ ಸಂಸದರಾಗಿ ಗೆದ್ದು ಪ್ರಧಾನಿಯಾದರು. ಐತಿಹಾಸಿಕವಾಗಿರುವ ಈ ಜಿಲ್ಲೆಗೆ ಮರುನಾಮಕರಣ ಮಾಡುವುದು ಸರಿಯಾದ ನಿರ್ಧಾರವಲ್ಲ ಎಂದು ಸಂಸದರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!