LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

ಲಕ್ನೋ:ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ದೀಕ್ಷಿತ್‌ ನಿಧನರಾಗಿದ್ದಾರೆ.

ಕಾಶಿಯ ಪ್ರಧಾನ ಅರ್ಚಕರೂ ಆಗಿದ್ದ ದೀಕ್ಷಿತ್‌ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಾಶಿಯ ಪ್ರಖ್ಯಾತ ವೈದಿಕ ಶ್ರೌತ-ಸ್ಮಾರ್ತ ಸಂಸ್ಕಾರ ತಜ್ಞ, ಸಾಂಗ್ವೇದ ವಿದ್ಯಾಲಯದ ಯಜುರ್ವೇದ ಶಿಕ್ಷಕ ಲಕ್ಷ್ಮೀಕಾಂತ ದೀಕ್ಷಿತ್ ಅವರ ನಿಧನದಿಂದ ಸನಾತನಿ ಜಗತ್ತು ತುಂಬಲಾರದ ನಷ್ಟವನ್ನು ಅನುಭವಿಸಿದೆ.

ದೀಕ್ಷಿತ್‌ ಅವರ ನೇತೃತ್ವದಲ್ಲಿ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪಿಸಲಾಯಿತು. ರಾಮಮಂದಿರದಲ್ಲಿ ಎಲ್ಲಾ ಪೂಜೆಗಳು ನೆರವೇರಿದ್ದವು. 2021ರ ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಯ ಪೂಜೆಯಲ್ಲಿ ಅವರು ಪಾಲ್ಗೊಂಡಿದ್ದರು.

ಕಾಶಿಯ ವಿದ್ವಾಂಸರೂ, ಶ್ರೀರಾಮ ಜನ್ಮಭೂಮಿ ಪ್ರಾಣಪ್ರತಿಷ್ಠೆಯ ಪ್ರಧಾನ ಅರ್ಚಕರೂ ಆದ ವೇದಮೂರ್ತಿ ಅವರು, ಆಚಾರ್ಯ ಶ್ರೀ ಲಕ್ಷ್ಮೀಕಾಂತ ದೀಕ್ಷಿತ್ ಅವರ ನಿಧನ ಅಧ್ಯಾತ್ಮ ಮತ್ತು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಸಂಸ್ಕೃತ ಭಾಷೆ ಮತ್ತು ಭಾರತೀಯ ಸಂಸ್ಕೃತಿಗೆ ಅವರು ಮಾಡಿದ ಸೇವೆಗಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ