LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಎನ್‌ಐಎ ಅಧಿಕಾರಿಗಳಿಂದ ಸ್ಥಳ ಮಹಜರು

ಬೆಂಗಳೂರು : ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆತಂದು ರಾಮೇಶ್ವರಂ ಕೆಫೆಯಲ್ಲಿ ಎನ್‌ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ.

ಆರೋಪಿ ಮುಸಾವಿರ್‌ನನ್ನು ಕೆಫೆಗೆ ಕರೆತಂದು ಎನ್‌ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ಹಿನ್ನೆಲೆ ರಾಮೇಶ್ವರಂ ಕೆಫೆ ಸಮೀಪ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತೆಗಾಗಿ 50ಕ್ಕೂ ಅಧಿಕ ಪೊಲೀಸರ ನಿಯೋಜಿಸಲಾಗಿದೆ. ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡು ಐದು ತಿಂಗಳು ಕಳೆದ ಬಳಿಕ, ಇದೀಗ ಆರೋಪಿಯನ್ನು ಸ್ಥಳಕ್ಕೆ ಕರೆತಂದು ಮಹಜರು ನಡೆಸಲಾಗುತ್ತಿದೆ.

ಎನ್‌ಐಎ ಅಧಿಕಾರಿಗಳು ಘಟನಾ ಸ್ಥಳದಲ್ಲಿ 2-3 ಬಾರಿ ದೃಶ್ಯವನ್ನು ಮರು ಸೃಷ್ಟಿಸಿದ್ದಾರೆ. ಆರೋಪಿ ಮುಸಾವಿರ್, ೩ ಬಾರಿ ನಡೆದುಕೊಂಡು ಬಂದು ಯಾವ ರೀತಿ ಕೃತ್ಯ ಎಸಗಲಾಗಿತ್ತು ಎಂದು ತೋರಿಸಿರುತ್ತಾನೆ. ಕ್ಯಾಪ್, ಕನ್ನಡಕ, ಬ್ಯಾಗ್ ಹಾಕಿ ನಡೆದುಕೊಂಡು ಬಂದು ಯಾವ ರೀತಿಯಾಗಿ ಕೃತ್ಯ ಎಸಗಿದ್ದ ಎಂಬ ವಿವರಣೆಯನ್ನು ಅಧಿಕಾರಿಗಳಿಗೆ ನೀಡಿರುತ್ತಾನೆ.

ಆರೋಪಿಯು ತಾನು ಕೆಫೆಗೆ ಬಂದಿದ್ದ ರೀತಿ, ಬಾಂಬ್ ಇಟ್ಟಿದ್ದ ಸ್ಥಳ, ಕುಳಿತಿದ್ದ ಸ್ಥಳ ಎಲ್ಲವನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆ. ಈ ಎಲ್ಲವನ್ನು ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡ್ತಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !