LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರೀಲ್ಸ್ ಮಾಡಿದವರು ಕೆಲಸದಲ್ಲಿರಲು ಲಾಯಕ್ ಇಲ್ಲ'- ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ರೀಲ್ಸ್ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸಾರಿಗೆ ಇಲಾಖೆಯ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್ ಮಾಡಿದರೇ ಅಂತವರನ್ನು ಮುಲಾಜಿಲ್ಲದೆ ಅಮಾನತು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಚಾಲಕನೋರ್ವ ಛತ್ರಿ ಹಿಡಿದು ಬಸ್ ಓಡಿಸುತ್ತಿದ್ದ ವಿಡಿಯೋ ಭಾರೀ ವೈರಲ್ ಆಗಿತ್ತು. ಧಾರವಾಡ ಘಟಕದ ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಸಂಜೆ ಮಳೆ ಬರುತ್ತಿದ್ದಾಗ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಇದ್ದಾಗ ಚಾಲಕ ಛತ್ರಿ ಹಿಡಿದು ಬಸ್ ಚಲಾಯಿಸಿದ್ದರು. ಈ ದೃಶ್ಯವನ್ನು ನಿರ್ವಾಹಕಿ ಮೊಬೈಲಿನಲ್ಲಿ ಸೆರೆ ಹಿಡಿದಿದ್ದರು.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತನಿಖೆ ನಡೆಸಿ, ಇದು ಮನರಂಜನೆಗಾಗಿ ಮಾಡಿದ ವಿಡಿಯೋ ಎಂದು ಸ್ಪಷ್ಟನೆ ನೀಡಿತ್ತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆಬೆಂಗಳೂರು: ಸಿಎಂ ನಿವಾಸದಲ್ಲಿ ಬಜೆಟ್ ಬಗ್ಗೆ ಚರ್ಚೆಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೆ BDA ಮಾಸ್ಟರ್ ಪ್ಲಾನ್ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆ