LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಕೊತ್ತಂಬರಿ ಸೊಪ್ಪಿನ ತಂಬುಳಿ ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು...






  • ಕೊತ್ತಂಬರಿ ಸೊಪ್ಪು- 1 ಸಣ್ಣ ಗೊಂಚಲು

  • ಜೀರಿಗೆ - 1/2 ಚಮಚ

  • ಹಸಿರು ಮೆಣಸಿನಕಾಯಿ- 1

  • ತುರಿದ ತೆಂಗಿನಕಾಯಿ - 1/2 ಬಟ್ಟಲು

  • ಮೊಸರು- 1 ಬಟ್ಟಲು

  • ಕೆಂಪು ಮೆಣಸಿನಕಾಯಿ-1

  • ಅಡುಗೆ ಎಣ್ಣೆ / ತುಪ್ಪ- 2 ಚಮಚ

  • ಸಾಸಿವೆ- ಸ್ವಲ್ಪ

  • ಕರಿಬೇವು-ಸ್ವಲ್ಪ

  • ಇಂಗು-ಸ್ವಲ್ಪ

  • ಉಪ್ಪು- ರುಚಿಗೆ ತಕ್ಕಷ್ಟು







ಮಾಡುವ ವಿಧಾನ...






  • ಕೊತ್ತಂಬರಿ ಸೊಪ್ಪನ್ನು ಸ್ವಚ್ಛಗೊಳಿಸಿ, ಚೆನ್ನಾಗಿ ತೊಳೆಯಿರಿ. ನಂತರ ಕೊತ್ತಂಬರಿ ಸೊಪ್ಪು ಮತ್ತು ಹಸಿ ಮೆಣಸಿನಕಾಯಿಯನ್ನು ಸಣ್ಣಗೆ ಕತ್ತರಿಸಿಕೊಳ್ಳಿ.

  • ಬಾಣಲೆಯನ್ನು ಬಿಸಿ ಮಾಡಿ, ಎಣ್ಣೆ ಹಾಗೂ ಜೀರಿಗೆಯನ್ನು ಹಾಕಿ. ನಂತರ ಸಣ್ಣಗೆ ಕತ್ತರಿಸಿಕೊಂಡ ಕೊತ್ತಂಬರಿ ಸೊಪ್ಪು ಹಾಗೂ ಹಸಿಮೆಣಸಿನ ಕಾಯಿ, ತೆಂಗಿನ ತುರಿಯನ್ನು ಸೇರಿಸಿ. ಸಣ್ಣ ಉರಿಯಲ್ಲಿ 5 ಸೆಕೆಂಡ್ ಗಳ ಕಾಲ ಫ್ರೈ ಮಾಡಿ. ಬಳಿಕ ಇದನ್ನು ಮಿಕ್ಸಿ ಜಾರ್'ಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನೀರು ಸೇರಿಸಬಹುದು.

  • ನಂತರ ಇದಕ್ಕೆ 3 ಟೇಬಲ್ ಸ್ಪೂನ್ ನಷ್ಟು ಮೊಸರು ಸೇರಿಸಿ. ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಬಳಿಕ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ. ಆಮೇಲೆ ಒಂದು ಒಗ್ಗರಣೆ ಪಾತ್ರೆಗೆ 1 ಚಮಚ ಎಣ್ಣೆ ಹಾಕಿ ಅದು ಬಿಸಿಯಾಗುತ್ತಲೆ ಸಾಸಿವೆ, ಜೀರಿಗೆ, ಕೆಂಪು ಮೆಣಸಿನಕಾಯಿ, ಚಿಟಿಕೆ ಇಂಗು, ಕರಿಬೇವು ಹಾಕಿ. ಈ ಒಗ್ಗರಣೆಯನ್ನು ತಂಬುಳ್ಳಿಗೆ ಹಾಕಿ ಮಿಕ್ಸ್ ಮಾಡಿಕರೆ ರುಚಿಕರವಾದ ʼಕೊತ್ತಂಬರಿʼ ಸೊಪ್ಪಿನ ತಂಬುಳಿ ಸವಿಯಲು ಸಿದ್ಧ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST