LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಮಶ್ರೂಮ್ ಗ್ರೇವಿ ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು...






  • ಮಶ್ರೂಮ್ –ಎರಡು ಪ್ಯಾಕೆಟ್

  • ಬಟಾಣಿ- ಒಂದು ಬಟ್ಟಲು

  • ಈರುಳ್ಳಿ –2

  • ಟೊಮೆಟೊ– 4

  • ದನಿಯಾ ಪುಡಿ– ಎರಡು ಚಮಚ

  • ಗರಂ ಮಸಾಲ –ಒಂದು ಚಮಚ

  • ಅರಿಸಿನ ಪುಡಿ– ಒಂದು ಚಮಚ

  • ಶುಂಠಿ -ಬೆಳ್ಳುಳ್ಳಿ ಪೇಸ್ಟ್- 1 ಚಮಚ

  • ಕಸ್ತೂರಿ ಮೇಥಿ–ಒಂದು ಚಮಚ

  • ಸೋಂಪು ಕಾಳು –ಒಂದು ಚಮಚ

  • ಚಕ್ಕೆ –2

  • ಲವಂಗ –2

  • ಸ್ಟಾರ್ ಮಸಾಲ ಹೂ– 2

  • ಅನಾನಸ್ ಮೊಗ್ಗು-2

  • ಏಲಕ್ಕಿ –2

  • ಎಣ್ಣೆ- ನಾಲ್ಕು ಟೇಬಲ್ ಚಮಚ

  • ಉಪ್ಪು- ರುಚಿಗೆ ತಕ್ಕಷ್ಟು







ಮಾಡುವ ವಿಧಾನ...






  • ಪಾತ್ರೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿಕೊಳ್ಳಬೇಕು. ಕಸ್ತೂರಿ ಮೇಥಿ, ಸೋಂಪು, ಚಕ್ಕೆ -ಲವಂಗ, ಸ್ಟಾರ್ ಮಸಾಲ ಹೂ, ಅನಾನಸ್ ಮೊಗ್ಗು, ಏಲಕ್ಕಿ ಸೇರಿಸಿ ಮಿಶ್ರಣ ಮಾಡಬೇಕು.

  • ಬಳಿಕ ಹೆಚ್ಚಿದ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಚೆನ್ನಾಗಿ ಫ್ರೈ ಮಾಡಿಕೊಳ್ಳಬೇಕು. ಬಳಿಕ ಟೊಮೆಟೊ, ಶುಂಠಿ -ಬೆಳ್ಳುಳ್ಳಿ ಪೇಸ್ಟ್ ಹಾಗೂ ಸ್ವಲ್ಪ ಉಪ್ಪು ಹಾಕಿಕೊಂಡು ಬೆರೆಸಿಕೊಡಬೇಕು.

  • ನಂತರ ಮಸಾಲ ಪುಡಿಗಳು ಹಾಗೂ ಬಟಾಣಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ನೀರನ್ನು ಹಾಕಿ 5 ನಿಮಿಷಗಳ ಕಾಲ ಬಟಾಣಿ ಬೇಯಲು ಬಿಡಿ. ಇದೀಗ ಕತ್ತರಿಸಿದ ಮಶ್ರೂಮ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.

  • 10 ರಿಂದ 15 ನಿಮಿಷ ಬೇಯಲು ಬಿಡಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪನ್ನು ಉದುರಿಸಿ. ಇದೀಗ ರುಚಿಕರವಾದ ಮಶ್ರೂಮ್ ಗ್ರೇವಿ ಸವಿಯಲು ಸಿದ್ಧ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST