LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಮಶ್ರೂಮ್ ಫ್ರೈಡ್‌ರೈಸ್ ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು...











  • ಅನ್ನ – 1 ಬಟ್ಟಲು

  • ಅಣಬೆ – 150 ಗ್ರಾಂ (ತೊಳೆದು ಹೆಚ್ಚಿಟ್ಟುಕೊಂಡದ್ದು)

  • ಬೆಳ್ಳುಳ್ಳಿ – ಸ್ವಲ್ಪ (ಸಣ್ಣಗೆ ಹೆಚ್ಚಿದ್ದು)

  • ಈರುಳ್ಳಿ – ಅರ್ಧ ಬಟ್ಟಲು (ಸಣ್ಣಗೆ ಹೆಚ್ಚಿದ್ದು)

  • ಕೊತ್ತಂಬರಿ ಸೊಪ್ಪು – ಸ್ವಲ್ಪ

  • ಆಲಿವ್ ಆಯಿಲ್- 2 ಚಮಚ

  • ಕಾಳುಮೆಣಸಿನ ಪುಡಿ – ಕಾಲು ಚಮಚ

  • ಉಪ್ಪು – ಅಗತ್ಯಕ್ಕೆ ತಕ್ಕಷ್ಟು







ಮಾಡುವ ವಿಧಾನ...






  • ಮೊದಲಿಗೆ ಒಂದು ಬಾಣಾಲೆಯಲ್ಲಿ ಆಲಿವ್ ಆಯಿಲ್ ಹಾಕಿಕೊಂಡು ಕಾದ ನಂತರ ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಹಾಕಿಕೊಂಡು 2 ನಿಮಿಷಗಳ ಕಾಲ ಚನ್ನಾಗಿ ಫ್ರೈ ಮಾಡಿಕೊಳ್ಳಿ.

  • ಬಳಿಕ ಇದಕ್ಕೆ ಹೆಚ್ಚಿದ ಅಣಬೆಗಳನ್ನು ಹಾಕಿಕೊಂಡು ಕಂದು ಬಣ್ಣ ಬರುವವರೆಗೆ ಚನ್ನಾಗಿ ಹುರಿದುಕೊಳ್ಳಿ. ಇದರ ನೀರಿನಾಂಶ ಸಂಪೂರ್ಣವಾಗಿ ಬಿಡುವುದರಿಂದ ಫ್ರೈಡ್‌ರೈಸ್ ಇನ್ನಷ್ಟು ರುಚಿಯನ್ನು ನೀಡುತ್ತದೆ.

  • ನಂತರ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿಕೊಂಡು ಸ್ವಲ್ಪ ಫ್ರೈ ಮಾಡಿಯ ನಂತರ ಅದಕ್ಕೆ ಕಾಳುಮೆಣಸಿನ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ.

  • ಬಳಿಕ ಈ ಮಿಶ್ರಣಕ್ಕೆ ಅನ್ನವನ್ನು ಹಾಕಿ  5ರಿಂದ 6 ನಿಮಿಷಗಳ ಕಾಲ ಚೆನ್ನಾಗಿ ಮಿಶ್ರಣ ಮಾಡಿ. ಈಗ ಮಶ್ರೂಮ್ ಫ್ರೈಡ್‌ರೈಸ್ ಸವಿಯಲು ಸಿದ್ಧ.











Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST