LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರ ʼಅಕ್ಕಿ ಕಡುಬು’ ಮಾಡುವ ವಿಧಾನ

ಒಮ್ಮೆ ಈ ಅಕ್ಕಿ ಕಡುಬನ್ನು ಮಾಡಿ ಸವಿಯಿರಿ. ಇದು ಉಡುಪಿ – ಮಂಗಳೂರು ಕಡೆ ಬೆಳಗ್ಗಿನ ತಿಂಡಿಗೆ ಮಾಡುತ್ತಾರೆ. ಕಡಿಮೆ ಸಾಮಾಗ್ರಿಯಲ್ಲಿ ಮಾಡಿಬಿಡಬಹುದು. 2 ಕಪ್ ಅಕ್ಕಿಯನ್ನು ಚೆನ್ನಾಗಿ ತೊಳೆದು 8 ಗಂಟೆಗಳ ಕಾಲ ನೆನೆಸಿಡಿ. ನಂತರ ಒಂದು ಮಿಕ್ಸಿ ಜಾರಿಗೆ ಈ ಅಕ್ಕಿಯನ್ನು ಹಾಕಿ ಅದನ್ನು ತರಿ ತರಿಯಾಗಿ ರುಬ್ಬಿಕೊಳ್ಳಿ. ಗ್ಯಾಸ್ ಮೇಲೆ ಒಂದು ಬಾಣಲೆ ಇಟ್ಟು ಅದಕ್ಕೆ ಈ ರುಬ್ಬಿಟ್ಟುಕೊಂಡ ಮಿಶ್ರಣ ಸೇರಿಸಿ. ಈ ಮಿಶ್ರಣ ತೆಳುವಾಗಿರಲಿ. ನಂತರ ಇದಕ್ಕೆ 1 ಕಪ್ ತೆಂಗಿನಕಾಯಿ ತುರಿ ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಹದ ಉರಿಯಲ್ಲಿ ಚೆನ್ನಾಗಿ ಕೈಯಾಡಿಸುತ್ತಾ ಇರಿ. ಇದು ದಪ್ಪಗಾಗುತ್ತಾ ಬರುತ್ತದೆ. ಉಂಡೆ ಹದಕ್ಕೆ ಬರುವವರೆಗೆ ಈ ಮಿಶ್ರಣವನ್ನು ಕೈಯಾಡಿಸುತ್ತಾ ಇರಿ. ನಂತರ ಕೈಗೆ ಸ್ವಲ್ಪ ನೀರು ಸವರಿಕೊಂಡು ಉಂಡೆ ಕಟ್ಟಿ ಇಡ್ಲಿ ಪಾತ್ರೆಯಲ್ಲಿ ಇಟ್ಟು 8 ನಿಮಿಷಗಳ ಕಾಲ ಬೇಯಿಸಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!