LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಣುಕಾಸ್ವಾಮಿ ಹತ್ಯೆ ಕೇಸ್: ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಸ್ಥಳಾಂತರ

ತುಮಕೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್‌ನನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಈ ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ನ್ಯಾಯಾಲಯ ತುಮಕೂರು ಕಾರಾಗೃಹಕ್ಕೆ ಶಿಫ್ಟ್ ಮಾಡುವಂತೆ ಆದೇಶಿಸಿದ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬಿಗಿ ಪೊಲೀಸ್ ಭದ್ರತೆಯಲ್ಲಿ ತುಮಕೂರು ಹೊರವಲಯದ ರಂಗಾಪುರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಸ್ಥಳಾಂತರಿಸಿದ್ದಾರೆ. ಈ ಹಿನ್ನೆಲೆ ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಮನವಿಯನ್ನು ಪರಿಗಣಿಸಿದ ನ್ಯಾಯಾಲಯ ಪ್ರಕರಣದ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಆದೇಶ ಹೊರಡಿಸಿತ್ತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನದೆಹಲಿ : ಚುನಾವಣೆಯಲ್ಲಿ ಸೋಲು, INDIA blocನಲ್ಲಿ ಬಿರುಕು ವದಂತಿ…!