LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರಿಗೆ “ಲಾಭದಾಯಕ ಹೈನುಗಾರಿಕೆ ತರಬೇತಿ : ನೊಂದಣಿಗೆ ಸೂಚನೆ

 

ಚಿತ್ರದುರ್ಗ : ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ “ಲಾಭದಾಯಕ ಹೈನುಗಾರಿಕೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿ. 28 ರಂದು ಬೆಳಗ್ಗೆ 10  ಗಂಟೆಗೆ ಹಮ್ಮಿಕೊಂಡಿದ್ದು ಆಸಕ್ತ ರೈತರು ಭಾಗವಹಿಸಬಹುದಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಡಾ. ದೊಡ್ಡಮಲ್ಲಯ್ಯ, ಹಿರಿಯೂರು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ನಾಗರಾಜ್  ಅವರು, ರಾಸುಗಳಲ್ಲಿ ಹೈನುಗಾರಿಕೆಗೆ ಉತ್ತಮ ತಳಿಗಳ ಆಯ್ಕೆ, ಕೊಟ್ಟಿಗೆ ಮತ್ತು ಮೇವಿನ ನಿರ್ವಹಣೆ ಹಾಗೂ ರಾಸುಗಳ ಆರೋಗ್ಯ ನಿರ್ವಹಣೆ ಬಗ್ಗೆ ವಿಶೇಷ ಉಪನ್ಯಾಸ ನೀಡುವರು.

ಆಸಕ್ತ 50 ಜನ ರೈತಭಾಂದವರು ಸದರಿ ತರಬೇತಿಯಲ್ಲಿ ಭಾಗವಹಿಸಿಸಲು ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಉಷಾರಾಣಿ ಎಂ (9980730696) ಟಿ.ಪಿ. ರಂಜಿತಾ, ಕೃಷಿ ಅಧಿಕಾರಿ (8277930959) ಮತ್ತು ಪವಿತ್ರಾ ಎಂ. ಜೆ. (9535412286) ರವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು.

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಆಗಮಿಸುವ ರೈತಭಾಂದವರಿಗೆ ವಾಸ್ತವಿಕ ಬಸ್ ದರದ ಪ್ರಯಾಣ ವೆಚ್ಚ ನೀಡಿ ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ'- ಯತ್ನಾಳ್ಮನೆ ಕೆಲಸದಾತನ ಮನೆಯಲ್ಲಿ 30 ಕೋಟಿ ರು. ನಗದು ಪತ್ತೆಮೇ 9ಕ್ಕೆ SSLC ಫಲಿತಾಂಶ ಪ್ರಕಟಮತದಾನ ಮಾಡಿದ ಮಾಜಿ ಸಿಎಂ ಬಿಎಸ್ ವೈ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಅಹಮದಾಬಾದ್ ನಲ್ಲಿ ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ : ಈ ಬಗ್ಗೆ ಏನಂದ್ರು..!?ರಾಜ್ಯದ 14 ಕ್ಷೇತ್ರಗಳು ಸೇರಿ 94 ಕ್ಷೇತ್ರಗಳಲ್ಲಿ ಮತದಾನ ಆರಂಭರುಚಿಕರವಾದ ಪುದೀನಾ ಸೂಪ್ ಮಾಡುವ ವಿಧಾನನೀವು ಪ್ರೀತಿ ಪ್ರೇಮಿಸಿದ ವ್ಯಕ್ತಿಗಳು ನಿಮ್ಮಂತೆ ಆಗಲು ಎರಡು ಲವಂಗಗಳಿಂದ ಈ ಶಕ್ತಿಶಾಲಿ ತಂತ್ರ ಮಾಡಿ ಸಾಕು!ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆ ತಿಂದರೆ ಆರೋಗ್ಯಕ್ಕೆ ಸಿಗುವ ಲಾಭಗಳು