LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈಲಿನಿಂದ ಹೊಳೆಗೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ : ನೀರಿಗೆ ಹಾರಿ ಬಂಧಿಸಿದ ಪೊಲೀಸರು..!


ಕಾಸರಗೋಡು: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಕಾಸರಗೋಡಿನಿಂದ ಆಲುವಾ ನ್ಯಾಯಾಲಯಕ್ಕೆ ಸಾಗಿಸುತ್ತಿದ್ದಾಗ ಆರೋಪಿ ದಾರಿ ಮಧ್ಯೆ ರೈಲಿನಿಂದ ಹೊಳೆಗೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ, ಈ ವೇಳೆ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೊಳೆಗೆ ಹಾರಿ ಆತನನ್ನು ಬಂಧಿಸಿದ ಘಟನೆ ನಡೆದಿದೆ.


ಇಡುಕ್ಕಿ ನಿವಾಸಿ ಸನೀಶ್‌ (40) ಹೊಳೆಗೆ ಹಾರಿದ ಆರೋಪಿ. ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಈತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದರು.

ಈತನನ್ನು ಇಬ್ಬರು ಪೊಲೀಸರ ಭದ್ರತೆಯೊಂದಿಗೆ ಮಂಗಳೂರು-ತಿರುವನಂತಪುರ ಏರನಾಡು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಆಲುವಾಕ್ಕೆ ಸಾಗಿಸಲಾಗುತ್ತಿತ್ತು. ರೈಲು ಶೋರ್ನೂರು ಭಾರತಪುಳದ ಸೇತುವೆ ಬಳಿ ತಲುಪಿದಾಗ ಆರೋಪಿ ತನಗೆ ಶೌಚಾಲಯಕ್ಕೆ ಹೋಗಬೇಕೆಂದು ಪೊಲೀಸರಲ್ಲಿ ತಿಳಿಸಿದ್ದಾನೆ. ಆಗ ಪೊಲೀಸರು ಆತನ ಕೈಕೋಳ ಕಳಚಿ ಶೌಚಾಲಯ ಬಳಿ ಸಾಗಿಸಲೆತ್ನಿಸಿದಾಗ ಪೊಲೀಸರ ಕೈಯಿಂದ ತಪ್ಪಿಸಿ ಸೇತುವೆಯಿಂದ ನದಿಗೆ ಹಾರಿದ್ದ. ಕೂಡಲೇ ಪೊಲೀಸರೂ ಹೊಳೆಗೆ ಹಾರಿ ಆತನನ್ನು ಬಂಧಿಸಿದರು. ರೈಲು ಸೇತುವೆಯಲ್ಲಿ ಸಾಗುವಾಗ ವೇಗವನ್ನು ಕಡಿಮೆಗೊಳಿಸಲಾಗಿತ್ತು.

ಹೊಳೆಗೆ ಹಾರಿದ ಸನೀಶ್‌ ಪ್ರಜ್ಞೆ ತಪ್ಪಿದ್ದು, ತೃಶ್ಶೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ: ರಸ್ತೆಗೆ ಕುಸಿದ ಮಣ್ಣು, ಬೃಹತ್ ಬಂಡೆ