LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈಲು ಹಿಡಿಯಲು ಪ್ಲಾಟ್‌ಫಾರ್ಮ್‌ಗೆ ಕಾರು ಚಾಲನೆ ಮಾಡಿದ ಯುಪಿ ಸಚಿವ

:ರೈಲು ಹತ್ತಲು ತಡವಾಯಿತು ಎಂದು ಉತ್ತರಪ್ರದೇಶದ ಪಶು ಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಸೈನಿ ನೇರವಾಗಿ ರೈಲ್ವೇ ಪ್ಲಾಟ್‌ಫಾರ್ಮ್‌ಗೆ ಕಾರು ನುಗ್ಗಿಸಿದ ಘಟನೆ ನಡೆದಿದೆ.

ಸಚಿವರು ತಮ್ಮ ವಿವಿಐಪಿ ಎಸ್‍ಯುವಿ ಕಾರನ್ನು ರೈಲು ನಿಲ್ದಾಣದೊಳಗೆ ಚಲಾಯಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಸಚಿವರ ಈ ನಡೆಗೆ ಖಂಡನೆ ವ್ಯಕ್ತವಾಗುತ್ತಿದೆ.

ಕಾರ್ಯಕ್ರಮವೊಂದಕ್ಕೆ ಹೋಗುವ ಹಿನ್ನಲೆ ಸಚಿವರು ಲಕ್ನೋದಿಂದ ರೈಲಿನಲ್ಲಿ ಬರೇಲಿಗೆ ಹೋಗಿ ನಂತರ ಹೌರಾ ಅಮೃತಸರ ಎಕ್ಸ್ ಪ್ರೆಸ್ ರೈಲನ್ನು ಹಿಡಿಯಬೇಕಿತ್ತು. ಹೀಗಾಗಿ ಅವರು ಚಾರ್‍ಬಾಗ್ ರೈಲು ನಿಲ್ದಾಣದಲ್ಲಿ ಪ್ಲಾಟ್‍ಫಾರ್ಮ್ ಸಂಖ್ಯೆ 4ಕ್ಕೆ ರೈಲು ಆಗಮಿಸುತ್ತದೆ. ಆದರೆ ಅವರು ರೈಲ್ವೇ ಪ್ಲಾಟ್‍ಫಾರ್ಮ್ ಗೆ ಬರೋದು ತಡವಾಗಿತ್ತು. ಈ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ಅಂಗವಿಕಲರಿಗೆ ಮೀಸಲಿಟ್ಟಿದ್ದ ರ್ಯಾಂಪ್‍ಗೆ ತೆಗೆದುಕೊಂಡು ಹೋಗಿ ಎಸ್ಕಲೇಟರ್ ಮೂಲಕ ನೇರವಾಗಿ ಪ್ಲಾಟ್ ಫಾರ್ಮ್ ಒಳಗೆ ಚಲಾಯಿಸಿದ್ದಾರೆ.

ಈ ರೀತಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಈ ಕುರಿತು ವಿಪಕ್ಷ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ಸಚಿವರು ಪ್ಲಾಟ್ ಫಾರ್ಮ್ ಗೆ ಬುಲ್ಡೋಜರ್ ಕೊಂಡೊಯ್ಯದಿದ್ದಕ್ಕೆ ಜನರು ಅವರಿಗೆ ಕೃತಜ್ಞರಾಗಿರಬೇಕು ಎಂದು ಟೀಕಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!ಪಿಎಚ್‍ಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ