LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೋಗಿ, ಕುಟುಂಬಸ್ಥರು ಅನುಮತಿಸದಿದ್ದರೆ ಐಸಿಯುಗೆ ದಾಖಲಿಸುವಂತಿಲ್ಲ: ಕೇಂದ್ರ ಸೂಚನೆ

ನವದೆಹಲಿ: ರೋಗಿ ಹಾಗೂ ಆತನ ಸಂಬಂಧಿಕರು ಒಪ್ಪಿಗೆ ಸೂಚಿಸಿದರೆ ಮಾತ್ರ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಕೊಡಿಸಬಹುದು. ಒಂದು ವೇಳೆ ಅವರು ವಿರೋಧಿಸಿದರೆ ಐಸಿಯುಗೆ ದಾಖಲಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಆಸ್ಪತ್ರೆಗಳಲ್ಲಿ ರೋಗಿಗಳನ್ನು ಐಸಿಯುಗೆ ದಾಖಲಿಸುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯನ್ನು 24 ಮಂದಿ ತಜ್ಞರು ಚರ್ಚಿಸಿ ಬಿಡುಗಡೆ ಮಾಡಿದ್ದಾರೆ. ಮಾರ್ಗಸೂಚಿಯ ಪ್ರಕಾರ ಯಾವುದೇ ರೋಗಿಗೆ ಬಲವಂತವಾಗಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸುವಂತಿಲ್ಲ. ರೋಗಿಗೆ ಹೆಚ್ಚಿನ ಚಿಕಿತ್ಸೆ ಪ್ರಯೋಜನವಿಲ್ಲದೇ ಇದ್ದಲ್ಲಿ ಅಥವಾ ಯಾವುದೇ ಚಿಕಿತ್ಸೆ ನೀಡಿದರೂ ರೋಗಿಯ ಆರೋಗ್ಯದಲ್ಲಿ ಚೇತರಿಕೆ ಕಾಣಿಸದೇ ಇದ್ದರೆ ಅವರಿಗೆ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡುವುದು ವ್ಯರ್ಥವೆಂದು ಹೇಳಲಾಗಿದೆ.

ಸಾಂಕ್ರಾಮಿಕ ರೋಗಗಳು, ವಿಪತ್ತು ಸಂದರ್ಭದಲ್ಲಿ ರೋಗಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದು. ರೋಗಿಗೆ ಅಂಗಾಂಗ ವೈಫಲ್ಯ, ಅಂಗಾಂಗ ಕಸಿ ಅಥವಾ ವೈದ್ಯಕೀಯ ಸ್ಥಿತಿ ಕ್ಷೀಣಿಸುವ ನಿರೀಕ್ಷೆ ಇದ್ದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಐಸಿಯುಗೆ ದಾಖಲಿಸಬೇಕು. ಹೃದಯ ಸಂಬಂಧಿ ಸಮಸ್ಯೆ, ಉಸಿರಾಟ ಸಮಸ್ಯೆ, ಯಾವುದಾದರೂ ಪ್ರಮುಖ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೆ ಹೀಗೆ ತೀವ್ರವಾಗಿ ಅನಾರೋಗ್ಯ ಪೀಡಿತರಾಗಿದ್ದರೆ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದು ಎಂದು ನಿಯಮಗಳಲ್ಲಿ ತಿಳಿಸಲಾಗಿದೆ.

ಇವಿಷ್ಟೇ ಅಲ್ಲದೆ ಮಾರ್ಗಸೂಚಿಯ ಅನುಸಾರ ರೋಗಿಯನ್ನು ಐಸಿಯುಗೆ ದಾಖಲಿಸುವ ಮೊದಲು ರೋಗಿಯ ರಕ್ತದೊತ್ತಡ, ನಾಡಿ ಬಡಿತ, ಹೃದಯ ಬಡಿತ, ಆಮ್ಲಜನಕ ಹೀರಿಕೊಳ್ಳುವ ಸಾಮರ್ಥ್ಯ, ಮೂತ್ರ ವಿಸರ್ಜನೆಯ ಪ್ರಮಾಣ, ನರದ ಸ್ಥಿತಿಗತಿ ಮೊದಲಾದವುಗಳ ಪರಿಶೀಲಿಸಬೇಕು. ಆ ಬಳಿಕವಷ್ಟೇ ರೋಗಿಯನ್ನು ಐಸಿಯುನಲ್ಲಿ ದಾಖಲಿಸಿಕೊಳ್ಳಬಹುದು ಎಂದು ಸೂಚಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 20ರವರೆಗೆ ಕೇರಳದ ಕೆಲವು ರಾಜ್ಯಗಳಿಗೆ ರೆಡ್ ಅಲರ್ಟ್‌ ಘೋಷಣೆಮಾಲಿವಾಲ್ ಮೇಲೆ ಹಲ್ಲೆ ಕೇಸ್‌-ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ 5 ದಿನ ಕಸ್ಟಡಿಗೆಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಕೋರ್ಟ್ವಾಹನ ಸವಾರರೇ ಗಮನಿಸ - ಜೂನ್ 1ರಿಂದ ಚಾಲನಾ ಪರವಾನಿಗೆ ನಿಯಮ ಬದಲಾವಣೆ'ದೇವರಾಜೇಗೌಡ ಮೋಸ್ಟ್ ಕ್ರಿಮಿನಲ್ ಮ್ಯಾನ್'- ಶಿವರಾಮೇಗೌಡಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ- ಬಿಜೆಪಿಯ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯಮಂಗಳೂರು: ಶಬರಿಮಲೆ ಯಾತ್ರಾರ್ಥಿ ಕೇರಳದಲ್ಲಿ ಹೃದಯಾಘಾತದಿಂದ ಸಾವು..!ಪ್ರಧಾನಿ ನರೇಂದ್ರ ಮೋದಿ ಹೊಸ ಬಯೋಪಿಕ್ ​: ಮೋದಿ ಪಾತ್ರದಲ್ಲಿ ಕಟ್ಟಪ್ಪ?ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯ ಪಾರುಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕ್ ವಿದ್ಯಾರ್ಥಿಗಳ ಮೇಲೆ ಹಲ್ಲೆ