ರೋಜ್‌ಗಾರ್ ಯೋಜನೆಯಡಿ 70 ಸಾವಿರಕ್ಕೂ ಹೆಚ್ಚು ಜನರಿಗೆ ಇಂದು ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ
ನವದೆಹಲಿ : ರೋಜ್‌ಗಾರ್ ಯೋಜನೆಯಡಿ ಹೊಸದಾಗಿ ನೇಮಕವಾಗಿರುವ ಸುಮಾರು 70 ಸಾವಿರಕ್ಕೂ ಹೆಚ್ಚು ಜನರಿಗೆ ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30 ಕ್ಕೆ ನೇಮಕಾತಿ ಪತ್ರ ವಿತರಿಸಲಿದ್ದಾರೆ. ದೇಶಾದ್ಯಂತ ರೋಜ್‌ಗಾರ್ ಯೋಜನೆಯಡಿ ಹೊಸ ನೇಮಕಾತಿಯಲ್ಲಿ ಉದ್ಯೋಗ ಪಡೆದ ಕಂದಾಯ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಣಕಾಸು ಇಲಾಖೆ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸೇರಿ ವಿವಿಧ ಸಚಿವಾಲಯಗಳು ಹಾಗೂ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಹೊಸ ನೇಮಕಾತಿಯ ಉದ್ಯೋಗಿಗಳು ಸೇವೆ ಸಲ್ಲಿಸಲಿದ್ದಾರೆ. ಕೇಂದ್ರ ಸರ್ಕಾರವು ರೋಜ್‌ಗಾರ್ ಮೇಳೆ ನಡೆಸುತ್ತಿದ್ದು, ಈ ಯೋಜನೆಯಡಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ದೇಶದ 44 ಸ್ಥಳಗಳಲ್ಲಿ ರೋಜ್‌ಗಾರ್ ಮೇಳವನ್ನು ಆಯೋಜಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.