ರೋಹಿತ್ ಶರ್ಮಾ, ರಿತಿಕಾ ಸಜ್ದೇ ದಂಪತಿಗೆ ಗಂಡು ಮಗು ಜನನ
ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ, ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ರೋಹಿತ್ ಶರ್ಮಾ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರೋಹಿತ್ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ. ಎರಡನೇ ಮಗುವಿಗೆ ತಂದೆಯಾಗುವ ಉದ್ದೇಶದಿಂದಲೇ ರೋಹಿತ್ ಶರ್ಮಾ, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಲು ಆಸ್ಟ್ರೇಲಿಯಾಗೆ ವಿಮಾನವೇರಿಲ್ಲ. ಮುಂಬೈನಲ್ಲಿದ್ದುಕೊಂಡೇ ರೋಹಿತ್ ಶರ್ಮಾ, ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದರು. ರಿತಿಕಾ ಗರ್ಭಿಣಿಯಾಗಿರುವ ವಿಚಾರವನ್ನು ಸಾಕಷ್ಟು ಸಮಯಗಳ ಕಾಲ ರೋಹಿತ್ ಶರ್ಮಾ ಗುಟ್ಟಾಗಿಯೇ ಇಟ್ಟಿದ್ದರು. ಆದರೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ರೋಹಿತ್ ಶರ್ಮಾ ಪಾಲ್ಗೊಳ್ಳುವುದು ಅನುಮಾನ ಎನ್ನುವಂತ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಹಿಟ್‌ಮ್ಯಾನ್ ಎರಡನೇ ಮಗುವಿಗೆ ತಂದೆಯಾಗುತ್ತಿರುವ ವಿಚಾರ ಬಹಿರಂಗವಾಗಿದ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ನವೆಂಬರ್ 22ರಿಂದ ಪರ್ತ್‌ನಲ್ಲಿ ಆರಂಭವಾಗಲಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.