LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲಾಸ್ ಏಂಜಲೀಸ್ ನಲ್ಲಿ ಚಿತ್ರೀಕರಣದ ವೇಳೆ ಶಾರುಖ್ ಮೂಗಿಗೆ ಗಾಯ

ಬಾಲಿವುಡ್ ಸ್ಟಾರ್ ಶಾರುಕ್ ಖಾನ್ ಪಠಾಣ್ ಸಿನಿಮಾದ ಸಕ್ಸಸ್ ನಂತರ ಇದೀಗ ಜವಾನ್ ಸಿನಿಮಾಕ್ಕಾಗಿ ಸಜ್ಜಾಗುತ್ತಿದ್ದಾರೆ. ಏತನ್ಮಧ್ಯೆ, ನಟ ಇತ್ತೀಚೆಗೆ ಯುನೈಟೆಡ್ ಸ್ಟೇಟ್ ನ ಲಾಸ್ ಏಂಜಲೀಸ್ನಲ್ಲಿ ಚಿತ್ರೀಕರಣದಲ್ಲಿ ಇರುವಾಗ ದುರಾದೃಷ್ಟಕರ ಘಟನೆಯೊಂದು ನಡೆದಿದೆ. ಚಿತ್ರೀಕರಣದ ವೇಳೆ ಶಾರುಖ್ ಮೂಗಿಗೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದ್ದು, ನಟ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಭರವಸೆ ನೀಡಿದ್ದಾರೆ. ಇದರಿಂದ ಅಭಿಮಾನಿಗಳು ಕೊಂಚ ನಿರಾಳರಾಗಿದ್ದಾರೆ. ಏಂಜಲೀಸ್ ನಲ್ಲಿ ಯಾವ ಪ್ರಾಜೆಕ್ಟ್ ಚಿತ್ರೀಕರಣ ಅನ್ನುವುದನ್ನು ತಂಡ ಇನ್ನೂ ಎಲ್ಲಿ ಕೂಡ ಬಹಿರಂಗ ಪಡಿಸಿಲ್ಲ. ಚಿತ್ರೀಕರಣ ವೇಳೆ ಮೂಗಿನಲ್ಲಿ ರಕ್ತ ಸ್ರಾವವಾಗಲು ಆರಂಭವಾಗಿದೆ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ರಕ್ತಸ್ರಾವ ನಿಲ್ಲಲು ಸಣ್ಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.ಮೂಗಿನ ಮೇಲೆ ಬ್ಯಾಂಡೇಜ್ ಹಾಕಿಕೊಂಡೇ ಶಾರುಕ್ ಮುಂಬೈ ಗೆ ಆಗಮಿಸಿ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಶಾರುಖ್ ಖಾನ್ ಅವರ ಜವಾನ್‌ನ ಬಹುನಿರೀಕ್ಷಿತ ಟ್ರೇಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ, ಹಾಗೂ ಸಿನಿ ತಂಡ ರಿಲೀಸ್ ಡೇಟ್ ಎನೌಂನ್ಸ್ ಮಾಡುವುದನ್ನು ಕೇಳಲು ಅಭಿಮಾನಿಗಳು ಕಾತುರರಾಗಿದ್ದಾರೆ. ಈ ಸಿನಿಮಾದಲ್ಲಿ ಕಿಂಗ್ ಖಾನ್ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರಂತೆ.ಒಟ್ಟಿನಲ್ಲಿ ಬ್ಯಾಕ್ ಟು ಬ್ಯಾಕ್ ಸೋಲನ್ನೇ ಕಂಡಿದ್ದ ಶಾರುಕ್ ಸಿನಿ ಜರ್ನಿ ಮತ್ತೆ ಚಿಗುರೊಡೆದು ಯಶಸ್ಸಿನ ಪಥದೆಡೆ ಸಾಗುತ್ತಿರುವುದು ಸುಳ್ಳಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯ