ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ತಿಂಗಳಿಗ 15,600 ರೂಪಾಯಿಂದ ಗರಿಷ್ಠ 39,100 ರೂಪಾಯಿವರೆಗೆ ನಿಗದಿಪಡಿಸಲಾಗಿದೆ. ಇನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 70,000 ರೂಪಾಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನಿಗದಿಪಡಿಸಲಾಗಿದೆ. ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ, ವಿದ್ಯಾರ್ಹತೆ ದಾಖಲೆ ಸೇರಿಂತೆ ಇತರ ದಾಖಲೆಗಳ ಪತ್ರಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಅಥವಾ IRCTC ಇಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ಬಳಿಕ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಂದರ್ಶನದ ಮೂಲಕ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರಿ ಸಂಸ್ಥೆಯ ಹುದ್ದೆಗೆ ಭಾರಿ ಬೇಡಿಕೆ ಇದೆ. ಈಗಾಗಲೇ IRCTC ಉದ್ಯೋಗಕ್ಕೆ ಹಲವರು ಅರ್ಜಿ ಸಲ್ಲಿಸಿದ್ದಾರೆ. ವೇತನ ಜೊತೆಗೆ ಇತರ ಕೇಂದ್ರ ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳು ಸಿಗಲಿದೆ.