LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ?

ನವದೆಹಲಿ: 2024ರ ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಕೈಜೋಡಿಸಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿರುವುದು ವರದಿಯಾಗಿದೆ.

ಇತ್ತೀಚೆಗಷ್ಟೇ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಮೈತ್ರಿ ಕುರಿತು ಚರ್ಚೆ ನಡೆಸಿರುವುದಾಗಿ ವರದಿ ಹೇಳಿದೆ.

ಚರ್ಚೆಯ ವೇಳೆ ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಕರ್ನಾಟಕದಲ್ಲಿ ನಾಲ್ಕು ಲೋಕಸಭಾ ಸ್ಥಾನ ಬಿಟ್ಟು ಕೊಡುವಂತೆ ದೇವೇಗೌಡರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಹಾಸನ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ಸಮ್ಮತಿಸಿದ್ದು, ಇನ್ನೊಂದು ಕ್ಷೇತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಐದು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಎಚ್.ಡಿ.ದೇವೇಗೌಡರು ಬೇಡಿಕೆ ಇಟ್ಟಿದ್ದಾರೆನ್ನಲಾಗಿದ್ದು, ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರಿಂದ ಮಂಡ್ಯ ಕ್ಷೇತ್ರ ಬಿಟ್ಟುಕೊಡಲು ಜೆ.ಪಿ.ನಡ್ಡಾ ಮತ್ತು ಅಮಿತ್‌ ಶಾ ನಿರಾಕರಿಸಿರುವುದಾಗಿ ಮೂಲಗಳು ಹೇಳಿವೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗಿನ ಜೆಡಿಎಸ್‌ ಮೈತ್ರಿ ಸಂಬಂಧ ಇನ್ನೂ ಹೆಚ್ಚಿನ ಮಾತುಕತೆ ನಡೆಯುವ  ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ