E-PAPER
17 Nov 2026, 12:23:30 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಲೋಕಸಭಾ ಚುನಾವಣೆ: ಮತಕ್ಷೇತ್ರಗಳಿಗೆ ಇವಿಎಂ--------------------------------ಸ್ಟ್ರಾಂಗ್ ರೂಮ್ ಗಳಿಗೆ ಇವಿಎಂ ರವಾನೆ: ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ-೨೭: ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮೊದಲ ಹಂತದ ರ್ಯಾಂಡಮೈಜೇಷನ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ವಿಧಾನಸಭಾ ಕ್ಷೇತ್ರವಾರು ರವಾನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ನಗರದ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಉಗ್ರಾಣ(ಗೊಡೌನ್) ದಲ್ಲಿರುವ ಎಲೆಕ್ಟ್ರಾನಿಕ ಮತಯಂತ್ರಗಳನ್ನು ಮಂಗಳವಾರ ಬಿಗಿಭದ್ರತೆಯೊಂದಿಗೆ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕಳುಹಿಸಲಾಯಿತು.ರ್ಯಾಂಡಮೈಜೇಷನ್ ಪ್ರಕ್ರಿಯೆಯಲ್ಲಿ ಹಂಚಿಕೆಗೊಂಡಿರುವ ಮತಯಂತ್ರಗಳನ್ನು ಜಿಪಿಎಸ್ ಆಧಾರಿತ ವಾಹನಗಳ ಮೂಲಕ ಪೊಲೀಸ್ ಭದ್ರತೆಯೊಂದಿಗೆ ಮಂಗಳವಾರ ಮಧ್ಯರಾತ್ರಿಯವರೆಗೆ ರವಾನೆ ಮಾಡಲಾಯಿತು.ಆಯಾ ತಾಲ್ಲೂಕುಗಳಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಮ್ ಗಳಲ್ಲಿ ಇವಿಎಂ ಇರಿಸಲಾಗುತ್ತದೆ. ಎರಡನೇ ಚುನಾವಣಾ ವೀಕ್ಷಕರು ಆಗಮಿಸಿದ ಬಳಿಕ ಅವರ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಎರಡನೇ ಹಂತದ ರ್ಯಾಂಡಮೈಜೇಷನ್ ಮಾಡಲಾಗುವುದು.ಎರಡನೇ ಹಂತದ ರ್ಯಾಂಡಮೈಜೇಷನ್ ಆದ ಬಳಿಕವೇ ಯಾವ ಮತಗಟ್ಟೆಗೆ ಯಾವ ಇವಿಎಂ ಹೋಗಲಿದೆ ಎಂಬುದು ಗೊತ್ತಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಎಲೆಕ್ಟ್ರಾನಿಕ್ ಮತಯಂತ್ರಗಳ ಪ್ರಾಥಮಿಕ ಹಂತದ ಪರಿಶೀಲನೆ(ಎಫ್.ಎಲ್.ಸಿ) ನಡೆಸಿ ಉಗ್ರಾಣದಲ್ಲಿ ಇಡಲಾಗುತ್ತದೆ.

ಹೀಗೆ ಎಫ್.ಎಲ್.ಸಿ ಮಾಡಲಾಗಿರುವ ಮತಯಂತ್ರಗಳನ್ನು ಪ್ರಥಮ ಹಂತದ ರ್ಯಾಂಡಮೈಜೇಷನ್ ಪ್ರಕ್ರಿಯೆ ಮೂಲಕ ಆಯಾ ಮತಕ್ಷೇತ್ರಗಳಿಗೆ ಅಗತ್ಯಾನುಸಾರ ಶೇ.೧೩೦ ರಷ್ಟು ಇವಿಎಂ ಹಂಚಿಕೆ ಮಾಡಲಾಗಿರುತ್ತದೆ ಎಂದು ವಿವರಿಸಿದರು.ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ಚದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ಜಿಲ್ಲೆಯ ಎಲ್ಲ ಹದಿನೆಂಟು ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು ಇವಿಎಂ ರವಾನೆ ಕಾರ್ಯದ ಉಸ್ತುವಾರಿ ವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.