E-PAPER
17 Nov 2026, 12:18:25 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಲೋಕಸಭಾ ಚುನಾವಣೆ-೨೦೨೪

ಮೈಕ್ರೋ ಆಬ್ಸರ್ವರ್‌ಗಳ ಕಾರ್ಯ ಮಹತ್ವದ್ದು: ಚುನಾವಣಾ ಸಾಮಾನ್ಯ ವೀಕ್ಷಕ ಜಿ.ಎಸ್.ಪಾಂಡಾ ದಾಸ್

ಚಿಕ್ಕೋಡಿ-೦೩: ಚುನಾವಣೆಯಲ್ಲಿ ಮೈಕ್ರೋ ಆಬ್ಸರ್ವರ್‌ಗಳ ಪಾತ್ರ ಮಹತ್ವದ್ದಾಗಿದ್ದು ಮೇ ೭ ರಂದು ಜರುಗಲಿರವು ಮತದಾನ ದಿನದಂದು ಅತೀ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಶ್ರೀ ಜಿ.ಎಸ್.ಪಾಂಡಾ ದಾಸ್ ಸೂಚಿಸಿದರು.
ಚಿಕ್ಕೋಡಿಯ ಬಿ.ಕೆ. ಕಾಲೇಜಿನಲ್ಲಿ ಶುಕ್ರವಾರ  ರಂದು ಜರುಗಿದ ಮೈಕ್ರೋ ಆಬ್ಸರ್ವರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮೈಕ್ರೋ ಆಬ್ಸರ್ವರ್‌ಗಳು ನಿಯೋಜಿತ ಮತಗಟ್ಟೆಗೆ ಮತದಾನಕ್ಕೂ ಮುನ್ನ ತೊಂಭತ್ತು ನಿಮಿಷ ನಡೆಯುವ ಅಣಕು ಮತದಾನದಿಂದ ಹಿಡಿದು ಮತದಾನ ಪ್ರಕ್ರಿಯೆ ಮುಗಿಯುವ ವರೆಗೂ ತೀವ್ರ ನಿಗಾವಹಿಸಬೇಕು. ಈ ಎಲ್ಲ ಪ್ರಕ್ರಿಯೆಗಳ ವರದಿಯನ್ನು ನಿಗದಿತ ನಮೂನೆಯಲ್ಲಿ ಚುನಾವಣಾ ವೀಕ್ಷಕರಾದ ನನಗೆ ಒದಗಿಸುವಂತೆ ಶ್ರೀ ಜಿ.ಎಸ್.ಪಾಂಡಾ ದಾಸ್ ಅವರು ತಿಳಿಸಿದರು.
ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ಶ್ರೀ ರಾಹುಲ ಶಿಂಧೆ ಮಾತನಾಡಿ ಮೈಕ್ರೋ ಆಬ್ಸರ್ವರ್‌ಗಳು ಮತದಾನಕ್ಕೂ ಮುನ್ನ ದಿನವಾದ ಮೇ ೬ ರಂದು ಬೆಳಗ್ಗೆ ೧೦ ಗಂಟೆಗೆ ಆಯಾ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ತೆರಳಿ ಸಹಾಯಕ ಚುನಾವಣಾಧಿಕಾರಿಗಳ ಎದುರು ಕರ್ತವ್ಯಕ್ಕೆ ವರದಿ ಮಾಡಿಕೊಂಡು ತಮಗೆ ನಿಯೋಜಿಸಿದ ಮತಗಟ್ಟೆಗೆ ಹಾಜರಾಗುವುದು. ತಪ್ಪಿದ್ದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ಅಭ್ಯರ್ಥಿ/ಏಜೆಂಟರ ಸಮ್ಮುಖದಲ್ಲಿ ನಡೆಯುವ ಅಣುಕು ಮತದಾನ ವೀಕ್ಷಣೆ ಮಾಡಬೇಕು. ಅಣುಕು ಮತದಾನದ ಸಂದರ್ಭದಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಸಮಾನ ಮತ ಚಲಾವಣೆಯಾಗಿರುವುದನ್ನು ದೃಢೀಕರಿಸುವುದು. ಚುನಾವಣಾ ಆಯೋಗ ನೀಡಿರುವ ಮಾರ್ಗದರ್ಶನದಂತೆ ಎಲ್ಲ ಅಂಶಗಳನ್ನು ಪಾಲನೆಯಾಗುವಂತೆ ಎಚ್ಚರ ವಹಿಸಬೇಕು. ಮತಗಟ್ಟೆಗೆ ಇರುವಂತಹ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳುವದು ಮೈಕ್ರೋ ಆಬ್ಸರ್ವರ್‌ಗಳ ಜವಾಬ್ದಾರಿಯಾಗಿರುತ್ತದೆ.
ಮತದಾನದ ದಿನದಂದು ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯನ್ನು ಸೂಕ್ಷö್ಮವಾಗಿ ಪರೀಶಿಲಿಸಬೇಕು. ಮತಗಟ್ಟೆಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೆ ಪ್ರಕರಣ ದಾಖಲಿಸುವಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಶ್ರೀ ರಾಹುಲ ಶಿಂಧೆ ಸೂಚಿಸಿದರು.
ಕಾರ್ಯಾಗಾರದಲ್ಲಿ ಚಿಕ್ಕೋಡಿ ಲೋಕಸಭಾ ಚುನಾವಣಾಧಿಕಾರಿಗಳ ಕಚೇರಿಯ ಸಹಾಯಕ ಚುನಾವಣಾಧಿಕಾರಿ ಶ್ರೀ ಬಸವರಾಜ ಅಡವಿಮಠ, ಜಿಲ್ಲಾ ತರಬೇತಿ ನೋಡೆಲ್ ಅಧಿಕಾರಿ ಶ್ರೀಮತಿ ಗೀತಾ ಕೌಲಗಿ, ಚಿಕ್ಕೋಡಿ ಉಪವಿಭಾಗಾಧಿಕಾರಿ ಶ್ರೀಮತಿ ಮೆಹಬೂಬಿ ಸೇರಿದಂತೆ ಮೈಕ್ರೋ ಆಬ್ಸರ‍್ಸ್ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.