LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೋಕಸಭೆ ಮಾದರಿಯಲ್ಲಿ ಪರಿಷತ್ ಚುನಾವಣೆ ಎದುರಿಸುತ್ತೇವೆ: ಡಿಕೆಶಿ

ಬೆಂಗಳೂರು: "ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಮೋದಿ ಅವರ ಅವಧಿ ಕೇವಲ ಒಂದು ವರ್ಷ ಮಾತ್ರ ಎಂಬ ಕೇಜ್ರಿವಾಲ್ ಅವರ ಹೇಳಿಕೆಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿ "ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗು ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು" ಎಂದರು.

ಲೋಕಸಭೆ ಮಾದರಿಯಲ್ಲಿ ಪರಿಷತ್ ಚುನಾವಣೆ ಎದುರಿಸುತ್ತೇವೆ:

ಪರಿಷತ್ ಚುನಾವಣೆ ಪೂರ್ವಭಾವಿ ಸಭೆ ಬಗ್ಗೆ ಕೇಳಿದಾಗ, "ಶಿಕ್ಷಕರ ಹಾಗು ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಮ್ಮ ಪಕ್ಷದ ನಾಯಕರು ಹಾಗು ಪದಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಎಲ್ಲಾ ಮುಖಂಡರು ಸೇರಿ ಈ ಚುನಾವಣೆ ಎದುರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇನ್ನು ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ" ಎಂದು ತಿಳಿಸಿದರು.

ಲೋಕಸಭೆ ಮಾದರಿಯಲ್ಲೇ ಚುನಾವಣೆ ಮಾಡುತ್ತೀರಾ ಎಂದು ಕೇಳಿದಾಗ, "ಹೌದು, ಲೋಕಸಭೆ ಚುನಾವಣೆ ಮಾದರಿಯಲ್ಲಿ ಈ ಚುನಾವಣೆ ಎದುರಿಸುತ್ತೇವೆ" ಎಂದರು.

ಪರಿಷತ್ ಚುನಾವಣೆಗೂ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ಬಗ್ಗೆ ಕೇಳಿದಾಗ, "ಅವರು ಶಾಶ್ವತವಾಗಿ ಮೈತ್ರಿ ಮಾಡಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಮೈತ್ರಿಯಾದರೂ ಮಾಡಿಕೊಳ್ಳಲಿ, ವಿಲೀನವಾದರೂ ಮಾಡಿಕೊಳ್ಳಲಿ. ಅದು ಅವರ ಪಕ್ಷಗಳ ತೀರ್ಮಾನ. ನಮಗೂ ಅದಕ್ಕೂ ಸಂಬಂಧವಿಲ್ಲ" ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಬಿ.ವೈ ವಿಜಯೇಂದ್ರಗೆ ರಾಜೀನಾಮೆ ಪತ್ರ ಕಳಿಸಿದ ಸಿ.ಪಿ ಯೋಗೇಶ್ವರ್ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜಾಮೀನು ಮಂಜೂರುಬಾಯ್ ಫ್ರೆಂಡ್ ಜೊತೆಗಿನ ವೀಡಿಯೋ ಕರೆ ದೃಶ್ಯಗಳನ್ನಿಟ್ಟುಕೊಂಡು ಅಕ್ಕನಿಂದಲೇ ತಂಗಿಗೆ ಬ್ಲಾಕ್ ಮೇಲ್ಇಬ್ಬರು ಸ್ನೇಹಿತೆಯರಿಗೆ ಒಬ್ಬನೇ ಪ್ರಿಯಕರ- ಗೋರಖ್‌ಪುರದ ವಿಶಿಷ್ಟ ಪ್ರೇಮಕಥೆಎಣ್ಣೆ ಅಲ್ಲ, ಬಿಹಾರದ ಟ್ಯಾಂಕರ್‌ನಲ್ಲಿ 200 ಬಾಕ್ಸ್‌ ಮದ್ಯ ಸಾಗಾಟ!6 ಮಂದಿ ಉಗ್ರರ ಬಂಧಿಸಿದ ಭದ್ರತಾ ಪಡೆ; ಶಸ್ತ್ರಾಸ್ತ್ರ ವಶಕ್ಕೆಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ?ಕಲುಷಿತ ನೀರು ಕುಡಿದು ನವ ಜಾತ ಶಿಶು ಸೇರಿ ಐವರು ಸಾವುಡಿ.ಕೆ. ಶಿವಕುಮಾರ್ ಮನೆಯಲ್ಲಿ ಸೈನಿಕ ಪ್ರತ್ಯಕ್ಷ.! ಕೈ ಹಿಡಿಯಲಿದ್ದಾರ ಸಿ.ಪಿ. ಯೋಗೇಶ್ವರ್.!