LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಕ್ಫ್‌ಗೆ ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ಕೊಟ್ಟಿದ್ದು ಹೇಗೆ?: ಹೈಕೋರ್ಟ್

ಬೆಂಗಳೂರು: ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಗೆ ನೀಡಿರುವುದನ್ನು ಎಲ್ಲಿಯೂ ಕೇಳಿಲ್ಲ ಎಂದು ನುಡಿದಿರುವ ಹೈಕೋರ್ಟ್, ಯಾವ ಕಾನೂನಿನ ಅಧಿಕಾರ ಬಳಸಿ ಇಂತಹ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

 

ಮುಸ್ಲಿಂ ಸಮುದಾಯದವರ ವಿವಾಹ ನೋಂದಣಿ ಪ್ರಮಾಣಪತ್ರಗಳನ್ನು ವಿತರಿಸುವ ಅಧಿಕಾರವನ್ನು ಕರ್ನಾಟಕ ವಕ್ಫ್‌ ಮಂಡಳಿಗೆ ನೀಡಿ ರಾಜ್ಯ ಅಲ್ಪಸಂಖ್ಯಾತ, ವಕ್ಫ್‌ ಮತ್ತು ಹಜ್ ಇಲಾಖೆಯು 2023ರ ಸೆ.30ರಂದು ಹೊರಡಿಸಿದ ಆದೇಶ ಪ್ರಶ್ನಿಸಿ ಬೆಂಗಳೂರಿನ ಆಲಂಪಾಷಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

 

ಮುಸ್ಲಿಂ ಸಮುದಾಯದವರ ವಿವಾಹ ನೋಂದಣಿ ಪ್ರಮಾಣಪತ್ರಗಳನ್ನು ವಿತರಿಸುವ ಅಧಿಕಾರವನ್ನು ಕರ್ನಾಟಕ ವಕ್ಫ್‌ ಮಂಡಳಿಗೆ ನೀಡಿ ರಾಜ್ಯ ಅಲ್ಪಸಂಖ್ಯಾತ, ವಕ್ಫ್‌ ಮತ್ತು ಹಜ್ ಇಲಾಖೆಯು 2023ರ ಸೆ.30ರಂದು ಹೊರಡಿಸಿದ ಆದೇಶ ಪ್ರಶ್ನಿಸಿ ಬೆಂಗಳೂರಿನ ಆಲಂಪಾಷಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

 

ಈ ಅರ್ಜಿಯು ಮುಖ್ಯನ್ಯಾಯಮೂರ್ತಿ ಎನ್ .ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಾಗ ಸರ್ಕಾರಿ ವಕೀಲರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದಕ್ಕೆ ಒಪ್ಪದ ನ್ಯಾಯಪೀಠವು ವಿಚಾರಣೆಯನ್ನು ನ.21ಕ್ಕೆ ಮುಂದೂಡಿತು.

 

ಮುಂದಿನ ವಿಚಾರಣೆ ವೇಳೆಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಹಾಗೆಯೇ, ವಕ್ಫ್‌ ಕಾಯ್ದೆಯಡಿ ಎಲ್ಲಿ ಮಂಡಳಿಗೆ ಮದುವೆ ನೋಂದಣಿ ಪ್ರಮಾಣಪತ್ರ ವಿತರಿಸುವಂತಹ ಅಧಿಕಾರವನ್ನು ನೀಡಬಹುದು ಎಂಬುದನ್ನು ಸಾಬೀತುಪಡಿಸುವಂತೆ ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿತು. ಸರ್ಕಾರವು 2023ರ ಸೆ.30ರಂದು ಹೊರಡಿಸಿರುವ ಆದೇಶವು ವಕ್ಫ್‌ ಕಾಯ್ದೆ 1995ರ ನಿಯಮಗಳಿಗೆ ವಿರುದ್ದವಾಗಿದೆ. ಹಾಗಾಗಿ, ಸರ್ಕಾರದ ಆದೇಶ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಿಯಾಂಕ್ ಖರ್ಗೆನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವುಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿ