LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಕ್ಫ್ ನೋಟಿಸ್ : ರೈತರಿಗೆ ನೀಡಿದ್ದ ನೋಟಿಸ್ ವಾಪಸ್‌ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ವಕ್ಫ್‌ ಬೋರ್ಡ್ ನೋಟಿಸ್ ವಿವಾದ ತಾರಕ್ಕಕ್ಕೆ ಏರಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ರೈತರಿಗೆ ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯುವ ವಿಚಾರವಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮ್ಯುಟೇಷನ್ ಮಾಡಲು ಯಾವುದೇ ಕಚೇರಿ, ಪ್ರಾಧಿಕಾರದ ನಿರ್ದೇಶನಗಳನ್ನು ತಕ್ಷಣ ಹಿಂಪಡೆಯಬೇಕು. ಮ್ಯುಟೇಷನ್ ಪ್ರಕ್ರಿಯೆ ಕೂಡಲೇ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ಎಲ್ಲಾ ನೋಟೀಸ್‌ಗಳನ್ನ ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅಧಿಕೃತ ಅದೇಶ ಹೊರಡಿಸಿದೆ.

ಸಿಎಂ‌ ಸಿದ್ದರಾಮಯ್ಯ ಆದೇಶದ ಬಳಿಕವೂ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ನೆನಪೋಲೆ ಹೊರಡಿಸುವ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಅಪರ ಕಾರ್ಯದರ್ಶಿ ಡಾ.ಬಿ.ಉದಯ್ ಕುಮಾರ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಉಪಚುನಾವಣೆ ಹೊತ್ತಿನಲ್ಲಿ ರೈತರಿಗೆ ವಕ್ಫ್ ನೋಟಿಸ್ ನೀಡಿರುವ ವಿಚಾರ ಕೇವಲ ವಿಪಕ್ಷಗಳಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲೂ ಅಸಮಾಧಾನಕ್ಕೆ ಕಾರಣವಾಗಿತ್ತು.

ರೈತರು ಹೋರಾಟದ ಹಾದಿ ಹಿಡಿಯುವ ಮುನ್ನ ನೋಟಿಸ್‌ಗಳನ್ನ ನೀಡೋದನ್ನ ನಿಲ್ಲಿಸಿ ಎಂದೆಲ್ಲ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಸಚಿವರು ಮತ್ತು ಶಾಸಕರು ಮನವಿ ಮಾಡಿದ್ದರು. ಅದು ಅಲ್ಲದೆ ವಿಪಕ್ಷಗಳು ವಕ್ಫ್ ನೋಟಿಸ್ ವಿಚಾರವನ್ನ ದೊಡ್ಡ ಹೋರಾಟ ಮಾಡಲು ತಯಾರಿ ನಡೆಸುತ್ತಿದ್ದರು ಇದನ್ನೆಲ್ಲ ಮನಗೊಂಡು ರೈತರಿಗೆ ನೀಡಿದ್ದ ನೋಟಿಸ್ ವಾಪಸ್ ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!