LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ವಕ್ಫ್ ಬೋರ್ಡ್ ಕಾನೂನು ಸಮುದಾಯದ ವೈಯಕ್ತಿಕ ಕಾನೂನು, ಮಧ್ಯಪ್ರವೇಶಿಸುವುದು ಸಂವಿಧಾನ ಬಾಹಿರ'- ಸಿಎಂ

ಮೈಸೂರು:ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ತಿದ್ದುಪಡಿ ಬಿಲ್ ತರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಹಾಗೂ ಎನ್ ಡಿ ಎ ಯವರಿಗೆ ಅಲ್ಪಸಂಖ್ಯಾತರ ಮೇಲೆ ಕೋಪವಿರುವಂತಿದೆ.ಬಿಜೆಪಿಯವರು ಎಂದಿಗೂ ಜಾತ್ಯಾತೀತತೆ, ಸಾಮಾಜಿಕ ನ್ಯಾಯದ ಪರವಾಗಿ ನಿಂತವರಲ್ಲ. ಬಿಜೆಪಿ ಮೊದಲಿನಿಂದಲೂ ಕೋಮುವಾದಿ ಪಕ್ಷವಾಗಿಯೇ ಗುರುತಿಸಿಕೊಂಡಿದ್ದು, ಜಾತ್ಯಾತೀತ ತತ್ವವನ್ನು ನಂಬುವುದಿಲ್ಲ. ಮತಾಂತರ ನಿಷೇಧ ಕಾನೂನು, ಗೋಹತ್ಯೆ ತಿದ್ದುಪಡಿಗಳನ್ನು ಜಾರಿಗೆ ತಂದ ಬಿಜೆಪಿಯವರು ಇಂದು ವಕ್ಫ ಬೋರ್ಡ್ ತಿದ್ದುಪಡಿ ಪ್ರಯತ್ನಕ್ಕೂ ಕೈಹಾಕಿದ್ದಾರೆ. ವಕ್ಫ್ ಬೋರ್ಡ್ ಕಾನೂನು ಆ ಸಮುದಾಯದ ವೈಯಕ್ತಿಕ ಕಾನೂನಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವುದು ಸಂವಿಧಾನ ಬಾಹಿರ. ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟ, ಕೇಂದ್ರದ ಈ ನಿಲುವನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದರು.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಆರ್ ಟಿ ಐ ಕಾರ್ಯಕರ್ತರು ಮುಖ್ಯಮಂತ್ರಿಗಳ ವಿರುದ್ದ ದೂರು ದಾಖಲಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸುಳ್ಳು ಕೇಸುಗಳನ್ನು ದಾಖಲಿಸಿದರೆ, ಅವು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?